Tuesday, November 24, 2026

ಪ್ರಾಯೋಗಿಕ ಆವೃತ್ತಿ

ನಾಳೆಯಿಂದ ರಾಜ್ಯದಲ್ಲಿ ಮತ್ತೇ ಮುಂಗಾರಿನ ಅಬ್ಬರ : ಮಳೆ ಸಾಧ್ಯತೆ

ಮೇ ತಿಂಗಳಲ್ಲಿ ಎಡಬಿಡದೆ ಸುರಿದು ಅವಾಂತರ ಸೃಷ್ಟಿಸಿದ್ದ ಮುಂಗಾರು ಮಳೆ ಬಿಡುವು ನೀಡಿತ್ತು. ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಿಗೆ ಬಿಡುವು ನೀಡಿತ್ತು. ಆದರೆ ಮುಂಗಾರು ಮಳೆ ಮತ್ತೆ ಜೂನ್ 8 ರಿಂದ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕದ 11 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು, ಕೃಷ್ಣಾ ನದಿ ತೀರದ ಜನರಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ.

ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಸಂಭವವಿದೆ. ಜೂನ್ 9 ರವರೆಗೆ ರಾಜ್ಯಾದ್ಯಂತ ಅತಿ ಸಾಧಾರಣ ಮಳೆಯಾಗಲಿದೆ. ಜೂ. 10 ರಿಂದ 12ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ