Wednesday, July 24, 2024

ಪ್ರಾಯೋಗಿಕ ಆವೃತ್ತಿ

ಪ್ರಾರಂಭಿಕ ಹಂತದಲ್ಲಿ ಕ್ಯಾನ್ಸರ್ ಪತ್ತೆ ಹಚ್ಚಿದರೆ ಗುಣಪಡಿಸಬಹುದು: ಡಾ: ವಿಜಯ್ ಕುಮಾರ್

ಕ್ಯಾನ್ಸರ್ ರೋಗವನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿದರೆ ಗುಣಪಡಿಸಬಹುದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಮಾಜಿ ನಿರ್ದೇಶಕರು ಹಾಗೂ ಯನಪೋಯ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ: ವಿಜಯಕುಮಾರ್ ಅವರು ತಿಳಿಸಿದರು.

ಆದಿಚುಂಚನಗಿರಿ ವೈದ್ಯಕೀಯ ಕಾಲೇಜಿನಲ್ಲಿ ಗುರುವಾರ ಆದಿಚುಂಚನಗಿರಿ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾಯೋಜನೆಯಡಿ , ಮಂಗಳೂರಿನ ಯನಪೋಯ ವಿಶ್ವವಿದ್ಯಾಲಯ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಷ್ಟ್ರೀಯ ಸೇವಾ ಯೋಜನಾ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ಸಾಮಾನ್ಯ ಕಾನ್ಸರ್ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕ್ಯಾನ್ಸರ್ ಬಗ್ಗೆ ಜನರು ಭಯಭೀತರಾಗುವುದು ಬೇಡ. ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ಸರಿಯಾದ ಚಿಕಿತ್ಸೆ ಪಡೆದರೆ ಸಂಪೂರ್ಣವಾಗಿ ಗುಣಮುಖರಾಗಬಹುದು ಎಂದರು.

ಜನರಿಗೆ ತಿಳುವಳಿಕೆ ನೀಡಿ ಕ್ಯಾನ್ಸರ್ ಬರದಂತೆ ತಡೆಗಟ್ಟುವುದು, ಕ್ಯಾನ್ಸರ್ ಇರುವವರನ್ನು ಪತ್ತೆ ಹಚ್ಚಿ ಗುಣಪಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಕ್ಯಾನ್ಸರ್ ರೋಗದ ವಿರುದ್ಧ ಹೋರಾಟ ನಡೆಸಿ ಅದನ್ನು ಜಯಿಸಿದ ಜನರ‌ ಸಂಖ್ಯೆ ಸಾಕಷ್ಷಿದೆ. ಕ್ಯಾನ್ಸರ್ ರೋಗಿಗಳು ರೋಗ ಬಂತೆಂದರೆ ಸಾಕು ಭಯ ಆತಂಕದಿಂದ ಕೊರಗಿ ಹೋಗುತ್ತಾರೆ.

ಕ್ಯಾನ್ಸರ್ ರೋಗ ಬಂದ ನಂತರ ತಜ್ಞ ವೈದ್ಯರನ್ನು ಸಂಪರ್ಕಿಸಬೇಕು. ಕ್ಯಾನ್ಸರ್ ರೋಗಿಗಳು ಮೊದಲು ಮಾನಸಿಕವಾಗಿ ರೋಗ ಎದುರಿಸಲು ಸಿದ್ಧರಾಗಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ವಿಶ್ವಾವಿದ್ಯಾಲಯದ ಕುಲಪತಿಗಳಾದ ಡಾ: ಎಂ ಎ ಶೇಖರ್, ಕುಲಸಚಿವರಾದ ಡಾ: ಸಿ ಕೆ ಸುಬ್ಬರಾಯ ಮತ್ತು ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿಗಳಾದ ಡಾ:ಪ್ರತಾಪ್ ಲಿಂಗಯ್ಯ, ಆದಿಚುಂಚನಗಿರಿ ವಿಶ್ವಾವಿದ್ಯಾಲಯದ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳು ಉಪಸ್ಥಿತರಿದ್ದರು.

ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ:ಎಂ ಜಿ ಶಿವರಾಮುರವರು ಗಣ್ಯರನ್ನು ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ 350ಕ್ಕೂ ಹೆಚ್ಚು ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದ ಅಧಿಕಾರಿಗಳು, ಸ್ವಯಂ ಸೇವಕರು ಭಾಗವಹಿಸಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!