Friday, September 20, 2024

ಪ್ರಾಯೋಗಿಕ ಆವೃತ್ತಿ

ಕಾರ್ಯಕರ್ತರಿಂದಲೇ “ಗೋ ಬ್ಯಾಕ್” ಎನಿಸಿಕೊಂಡವರು ವಿರೋಧ ಪಕ್ಷದ ನಾಯಕರಂತೆ !: ಕಾಂಗ್ರೆಸ್ ಲೇವಡಿ

ಬಿಜೆಪಿ ಕಾರ್ಯಕರ್ತರಿಂದಲೇ “ಗೋ ಬ್ಯಾಕ್” ಎನಿಸಿಕೊಂಡು ಓಡಿ ಬಂದವರು, ಈಗ ವಿರೋಧ ಪಕ್ಷದ ನಾಯಕರಂತೆ! ತಮ್ಮ ಕಾರ್ಯಕರ್ತರಿಂದಲೇ ಛೀಮಾರಿ ಹಾಕಿಕೊಂಡ, ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಸ್ವಪಕ್ಷದವರ ಬೆನ್ನಿಗೆ ಚೂರಿ ಹಾಕಿದ ಆರ್.ಅಶೋಕ್ ಅವರನ್ನು ಅವರ ಪಕ್ಷದ ನಾಯಕರು, ಕಾರ್ಯಕರ್ತರೇ ಒಪ್ಪುತ್ತಿಲ್ಲ, ಇನ್ನು ಜನತೆ ಒಪ್ಪುವರೇ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ. 

“>

ಲಿಂಗಾಯತ ನಾಯಕರನ್ನು ಬಳಸಿ ಬೀಸಾಡುವುದೇ ಬಿಜೆಪಿಯ ಅಜೆಂಡಾ!, ಯಡಿಯೂರಪ್ಪರನ್ನು ಎರಡೆರಡು ಬಾರಿ ಕಣ್ಣೀರು ಹಾಕಿಸಿ ಹುದ್ದೆಯಿಂದ ಕೆಳಗಿಳಿಸಿ ಕಳಿಸಿತ್ತು. ಜಗದೀಶ್ ಶೆಟ್ಟರ್ ರವರನ್ನು ಅಧಿಕಾರದಿಂದ ದೂರವಿಟ್ಟು ವಂಚಿಸಿತ್ತು. ವಿ. ಸೋಮಣ್ಣರನ್ನು ವ್ಯವಸ್ಥಿತವಾಗಿ ಸೋಲಿನ ಹೊಂಡಕ್ಕೆ ತಳ್ಳಲಾಗಿತ್ತು. ಲಕ್ಷ್ಮಣ್ ಸವದಿಯವರನ್ನು ಮೂಲೆಗುಂಪು ಮಾಡಿ ಕೂರಿಸಲಾಗಿತ್ತು. ಈಗ ಸಿಎಂ ಆಗಿದ್ದ ಬೊಮ್ಮಾಯಿಯವರು ಆಟಕ್ಕೂ ಇಲ್ಲ, ಲೆಕ್ಕಕ್ಕೂ ಇಲ್ಲದಂತೆ ನಿರ್ಲಕ್ಷಿಸಲಾಗಿದೆ. ಇದೇ ಮಾದರಿಯಲ್ಲಿ ವಿಜಯೇಂದ್ರ ಕೂಡ ಬಳಸಿ ಬೀಸಾಡಲು ತಂದಿರುವ ಹೊಸ “ಹರಕೆಯ ಕುರಿ” ಅಷ್ಟೇ! ಎಂದು ಟೀಕಿಸಿದೆ.

ಬಿಜೆಪಿ ಕಚೇರಿ ಶ್ರೀಮಂತರ ಚಹಾ ಹೋಟೆಲ್, ಇಲ್ಲಿ ಬಡವರ ಚಹಾ ಸಿಗಲ್ಲ ಅಂತ ಹೊರಗೆ ಟೀ ಕುಡಿಯಲು ಹೋದವರು ಜಗನ್ನಾಥ ಭವನದ ಎದುರು ಟೀ ಮಾರಿಕೊಂಡು ಕೂತಿದ್ದಾರಂತೆ, ಮೋದಿ ಮಾದರಿ!! ಹೇ ಜಗನ್ನಾಥ ಪ್ರಭು, ನೀನೆಷ್ಟು ಕ್ರೂರಿ..?! “ಜಾರಿದವರ ಯತ್ನ ಬೆಲ್ಲ” ಆಗ್ಲಿಲ್ಲವಲ್ಲಪ್ಪ..! ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!