Thursday, September 19, 2024

ಪ್ರಾಯೋಗಿಕ ಆವೃತ್ತಿ

ಮೂರು ಕೋಟಿ ಆಮಿಷ| ಒಡನಾಡಿ ಪರಶುರಾಮ್ ಗೆ ನೋಟೀಸ್ ಜಾರಿ

ಮುರುಘಾ ಮಠದ ಶಿವಮೂರ್ತಿ ಶರಣರು ವಿದ್ಯಾರ್ಥಿನಿಯರ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಹಿಂದೆ ಸರಿಯಲು ಮೂರು ಕೋಟಿ ಆಮಿಷ ಒಡ್ಡಲಾಗಿತ್ತು ಎಂಬ ಹೇಳಿಕೆ ನೀಡಿದ ಒಡನಾಡಿ ಸೇವಾ ಸಂಸ್ಥೆಯ ನಿರ್ದೇಶಕ ಎಂ.ಎಲ್. ಪರಶುರಾಮ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಆಮಿಷ ಒಡ್ಡಿರುವುದಕ್ಕೆ ಪೂರಕವಾದ ಸಾಕ್ಷಿಯೊಂದಿಗೆ ನವೆಂಬರ್ 29ರಂದು ವಿಚಾರಣೆಗೆ ಹಾಜರಾಗಿ ಎಂದು ಡಿವೈಎಸ್ಪಿ ಲೋಕೇಶ್ ನೋಟಿಸ್ ಜಾರಿ ಮಾಡಿದ್ದಾರೆ.

ಶಿವಮೂರ್ತಿ ಶರಣರ ವಿರುದ್ಧ ಪ್ರಕರಣ ದಾಖಲಿಸುವಂತೆ ವಿದ್ಯಾರ್ಥಿನಿಯರಿಗೆ ಕುಮ್ಮುಕ್ಕು ನೀಡಿದ ಆರೋಪದಲ್ಲಿ ಬಂಧಿತರಾಗಿರುವ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಮತ್ತು ಶಿಕ್ಷಕ ಬಸವರಾಜೇಂದ್ರ ನ್ಯಾಯಾಂಗ ಬಂಧನದ ಅವಧಿಯನ್ನು ಡಿ.12ರವರೆಗೆ ವಿಸ್ತರಿಸಲಾಗಿದೆ.

ಬಂಧನದ ಅವಧಿ ಮುಕ್ತಾಯಗೊಂಡಿದ್ದರಿಂದ ಇಬ್ಬರು ಆರೋಪಿಗಳನ್ನು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಬಂಧಿತ ಆರೋಪಿ ಮುರುಘಾ ಶರಣರು ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್ ಒಂದಕ್ಕೆ ಮುಂದೂಡಿದೆ. ಎರಡನೇ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ ಅರ್ಜಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಎದುರು ಬಂದಿದ್ದು, ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಡಿ.ಕೆ. ಕೋಮಲ ಅವರು ಡಿ.1 ಕ್ಕೆ ವಿಚಾರಣೆ ಮುಂದೂಡಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!