ಅಂತರಾಷ್ಟ್ರೀಯ ಯೋಗ ದಿನಾಚರಣೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನೆಹರು ಯುವ ಕೇಂದ್ರ, ಆಯುμï ಇಲಾಖೆ, ಪತಂಜಲಿ ಯೋಗ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಎನ್. ಎಸ್. ಎಸ್ ಮತ್ತು ಯುವಕ ಸಂಘ/ಯುವತಿ ಮಂಡಳಿ/ ರೋಟರಿ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಡ್ಯ ನೆಹರು ಯುವ ಕೇಂದ್ರ ಜಿಲ್ಲಾ ಯುವಜನ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐ.ಟಿ.ಐ ಪ್ರವೇಶಕ್ಕೆ ಅರ್ಜಿ ಆಹ್ವಾನ
ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ 2022-23ನೇ ಸಾಲಿಗೆ ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ)/ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳ ಪ್ರವೇಶಕ್ಕಾಗಿ ಮೇ. 25 ರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಜೂನ್ 06 ರೊಳಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ/ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಅರ್ಜಿ ಪಡೆದು ಭರ್ತಿಮಾಡಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಚೇರಿಯ ದೂ. ಸಂ: 08232-297054 ಸಂಪರ್ಕಿಸಬಹುದು ಎಂದು ಮಂಡ್ಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ವಿಶ್ವ ಸೈಕಲ್ ದಿನಾಚರಣೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನೆಹರು ಯುವ ಕೇಂದ್ರ, ಆಯುμï ಇಲಾಖೆ, ಪತಂಜಲಿ ಯೋಗ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್. ಎಸ್. ಎಸ್ ಮತ್ತು ಯುವಕ ಸಂಘ/ಯುವತಿ ಮಂಡಳಿ/ ರೋಟರಿ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಜೂನ್ 03 ರಂದು ವಿಶ್ವ ಸೈಕಲ್ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಡ್ಯ ನೆಹರು ಯುವ ಕೇಂದ್ರ ಜಿಲ್ಲಾ ಯುವಜನ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.