ಅವೈಜ್ಞಾನಿಕವಾಗಿ ಅಸ್ಥಿ ವಿಸರ್ಜನೆ ಮಾಡುವುದರಿಂದ ನದಿಗಳು ಕಲುಷಿತಗೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಕಾವೇರಿ ಪಾತ್ರದಲ್ಲಿ ವೈಜ್ಞಾನಿಕ ರೀತಿಯಲ್ಲಿ ಧಾರ್ಮಿಕ ವಿಧಿವಿಧಾನಗಳ ಆಚರಣೆ ಹಾಗೂ ಅಸ್ಥಿ ವಿಸರ್ಜನೆ ಮಾಡುವಾಗ ನೈರ್ಮಲ್ಯ ಕಾಪಾಡುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಗರಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಅಸ್ಥಿ ವಿಸರ್ಜನೆಯ ಜೊತೆಗೆ ಬಟ್ಟೆ ಮತ್ತು ಪೂಜಾ ಸಾಮಗ್ರಿಗಳನ್ನು ನದಿಗೆ ಎಸೆಯುವುದರಿಂದ ಮಾಲಿನ್ಯ ಹೆಚ್ಚಾಗುತ್ತಿದ್ದು, ಇದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಶ್ರೀರಂಗಪಟ್ಟಣ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.

ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಲು ಪಶ್ಚಿಮವಾಹಿನಿ, ಸ್ನಾನಘಟ್ಟ, ಗೋಸಾಯಿ ಘಾಟ್ ಮತ್ತು ಸಂಗಮ ಸ್ಧಳಗಳಲ್ಲಿ ಅಸ್ಥಿ ವಿಸರ್ಜನೆ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ನಡೆಸಲು ಪುರೋಹಿತರಿಗೆ ನಿರ್ಧಿಷ್ಟ ದರ ನಿಗದಿಪಡಿಸಬೇಕು ಹಾಗೂ ಆ ಸ್ಧಳಗಳಲ್ಲಿ ಸಿಸಿ ಟಿವಿ ಅಳವಡಿಸಬೇಕು ಎಂದು ಅವರು ತಿಳಿಸಿದರು.
ನದಿಯ ಪಾವಿತ್ರ್ಯತೆ ಮತ್ತು ಪರಿಸರ ರಕ್ಷಣೆಗಾಗಿ ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ ಅವರು ಸ್ಥಳಕ್ಕೆ ಭೇಟಿ ನದಿ ಪಾತ್ರವು ಮಲಿನ ಆಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಶ್ರೀರಂಗಪಟ್ಟಣ ತಾಲ್ಲೂಕಿನ ಮುಖ್ಯಾಧಿಕಾರಿಗಳು ಅಲ್ಲಿನ ಪುರೋಹಿತರನ್ನು ಕರೆದು ಸಭೆ ಕರೆದು ವೈಜ್ಞಾನಿಕ ರೀತಿಯಲ್ಲಿ ಧಾರ್ಮಿಕ ವಿಧಿವಿಧಾನ ಕೈ ಗೊಳ್ಳುವಂತೆ ತಿಳಿಸಲು ಜಿಲ್ಲಾಧಿಕಾರಿ ಗಳು ತಿಳಿಸಿದರು.
ನದಿಯ ಪಾವಿತ್ರ್ಯತೆ ಮತ್ತು ಪರಿಸರ ರಕ್ಷಣೆಗಾಗಿ ಪ್ರತ್ಯೇಕ ವಾದ ಮಾರ್ಗಸೂಚಿ ಸಿದ್ಥಪಡಿಸಿ ಹಾಗೂ ನದಿ ಪಾತ್ರವು ಮಲೀನವಾಗದಂತೆ ಅಗತ್ಯಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಥಿ ಕೋಶದ ಯೋಜನಾಧಿಕಾರಿ ನರಸಿಂಹಮೂರ್ತಿ, ಕಾರ್ಯಪಾಲಕ ಅಭಿಯಂತರರಾದ ಪ್ರತಾಪ್ ಹಾಗೂ ಮುಖ್ಯಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.




