Thursday, October 10, 2024

ಪ್ರಾಯೋಗಿಕ ಆವೃತ್ತಿ

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸಿ.ಪಿ.ಉಮೇಶ್ ನೇಮಕ

ಮಂಡ್ಯ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ.ಪಿ. ಉಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ.

ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಈ ಹಿಂದೆ ಜಿಲ್ಲಾ ಅಧ್ಯಕ್ಷರಾಗಿದ್ದ ಕೆ.ಆರ್.ಪೇಟೆಯ ಕೆ.ಜೆ.ವಿಜಯ್ ಕುಮಾರ್ ಅವರನ್ನು ಬದಲಾವಣೆ ಮಾಡಿ ಆ ಜಾಗಕ್ಕೆ ಉಮೇಶ್ ಅವರನ್ನು ಆಯ್ಕೆ ಮಾಡಿರುವ ಹಿಂದೆ ರಾಜಕೀಯ ತಂತ್ರಗಾರಿಕೆ ಅಡಗಿದೆ ಎಂಬುದು ಬಿಜೆಪಿ ಮುಖಂಡರ ಅಭಿಪ್ರಾಯ.

ಒಕ್ಕಲಿಗ ಸಮುದಾಯ ಪ್ರಬಲವಾಗಿರುವ ಮಂಡ್ಯ ಜಿಲ್ಲೆಯಲ್ಲಿ ಅದೇ ಸಮುದಾಯದ ಉಮೇಶ್ ಅವರನ್ನು ನೇಮಕ ಮಾಡಿದರೆ ಪಕ್ಷ ಸಂಘಟನೆಗೆ ಅನುಕೂಲ ಎಂದು ತಿಳಿದ ರಾಜ್ಯ ಬಿಜೆಪಿ ನಾಯಕರು ಉಮೇಶ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಕೂರಿಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿರುವ ಉಮೇಶ್ ಅವರು ರಾಜ್ಯ ಬಿಜೆಪಿ ನಾಯಕರು, ಸಚಿವರು ಹಾಗೂ ಕಾರ್ಯಕರ್ತರ ಜೊತೆ ಉತ್ತಮ ವಿಶ್ವಾಸ ಹೊಂದಿರುವುದು ಕೂಡ ಈ ಸ್ಥಾನಕ್ಕೆ ಬರಲು ನೆರವಾಗಿದೆ.

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮೇಶ್ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ಮಾಡಿರುವುದು ಪಕ್ಷ ಸಂಘಟನೆಯ ದೃಷ್ಟಿಯಿಂದ ಉತ್ತಮ ನಿರ್ಧಾರ. ಅವರು ಜಿಲ್ಲೆಯ ಎಲ್ಲಾ ಬಿಜೆಪಿ ಮುಖಂಡರು,ಕಾರ್ಯಕರ್ತರೊಂದಿಗೆ ಉತ್ತಮ ವಿಶ್ವಾಸ ಹೊಂದಿದ್ದು ಪಕ್ಷವನ್ನು ಮತ್ತಷ್ಟು ಸದೃಢಗೊಳಿಸುತ್ತಾರೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ಮುಂಬರುವ ವಿಧಾನ ಪರಿಷತ್ ಹಾಗೂ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಉಮೇಶ್ ಅವರು ಅಧ್ಯಕ್ಷರಾಗಿರುವುದು ಜಿಲ್ಲೆಯ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಒಳ್ಳೆಯ ಭರವಸೆ ಮೂಡಿಸಿದೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ವಿವೇಕ್ ತಿಳಿಸಿದರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಜಾರಿಗೆ ತಂದಿರುವ ಉಮೇಶ್ ರವರು ತಮ್ಮ ಕ್ರಿಯಾಶೀಲತೆಯಿಂದ ಜಿಲ್ಲೆಯಲ್ಲಿ ಬಿಜೆಪಿ ಪಕ್ಷಕ್ಕೆ ಹೆಚ್ಚಿನ ಶಕ್ತಿ ತುಂಬುತ್ತಾರೆ ಎಂದು ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ರಮೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.

ಉಮೇಶ್ ಅವರು ಜಿಲ್ಲೆಯಾದ್ಯಂತ ಸಕ್ರಿಯವಾಗಿ ಸಂಚರಿಸಿ ಪಕ್ಷವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತಾರೆ ಎಂಬ ವಿಶ್ವಾಸವಿದೆ.ಅವರೊಂದಿಗೆ ಜಿಲ್ಲೆಯ ಎಲ್ಲ ನಾಯಕರು, ಕಾರ್ಯಕರ್ತರು ಕೈ ಜೋಡಿಸಿ ಪಕ್ಷವನ್ನು ಬಲಿಷ್ಟವಾಗಿ ಕಟ್ಟುತ್ತೇವೆ ಎಂದು ಬಿಜೆಪಿ ಯುವನಾಯಕ ಹರ್ಷ ಹೇಳಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!