Thursday, September 19, 2024

ಪ್ರಾಯೋಗಿಕ ಆವೃತ್ತಿ

ನಾಳೆ ಮಂಡ್ಯದಲ್ಲಿ ಬೃಹತ್ ಉದ್ಯೋಗ ಮೇಳ : ಭಾಗವಹಿಸಲಿವೆ 100 ಕ್ಕೂ ಹೆಚ್ಚು ಕಂಪನಿಗಳು !

ಮಂಡ್ಯ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಮಂಡ್ಯ ಹಾಗೂ ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜು ಇವರಗಳ ಸಂಯುಕ್ತಾಶ್ರಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಡಿ.14ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಂಡ್ಯನಗರದ ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಸಮಾರಂಭ ಉದ್ಘಾಟಿಸುವರು. ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು. ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹಾಗೂ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ಕೆ.ಸಿ.ನಾರಾಯಣ ಗೌಡ ಉಪಸ್ಥಿತರಿರುವರು.

100 ಕ್ಕೂ ಹೆಚ್ಚು ಪ್ರಸಿದ್ಧ ಕಂಪನಿಗಳು ಭಾಗವಹಿಸಲಿವೆ 

ಉದ್ಯೋಗ ಮೇಳದಲ್ಲಿ ಅಂದಾಜು 100 ಕ್ಕೂ ಹೆಚ್ಚು ಪ್ರಸಿದ್ಧ ಕಂಪನಿಗಳು ಭಾಗವಹಿಸಲಿದ್ದು, ಹೆಚ್ಚು ಜನರು ಹೆಸರು ನೊಂದಾಯಿಸಿಕೊಳ್ಳಬಹುದು.

5,000 ಕ್ಕೂ ಹೆಚ್ಚು ಉದ್ಯೋಗ ಅವಕಾಶಗಳಿದ್ದು, 18 ರಿಂದ 35 ವರ್ಷದೊಳಗಿನ ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಇ ಅಥವಾ ಯಾವುದೇ ಪದವಿಧರರು‌ ಉದ್ಯೋಗ ಮೇಳದಲ್ಲಿ ಭಾಗವಹಿಸಲು http://skillconnect.kaushalkar.com/candidatereg ನಲ್ಲಿ ಹೆಸರು ನೊಂದಾಯಿಸಿಕೊಳ್ಳಬಹುದು. ಹೆಸರು ನೊಂದಾಯಿಸಿಕೊಳ್ಳಲು ಸಾಧ್ಯವಾಗದಿದ್ದರೂ ಸಹ ನೇರವಾಗಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. 

ಅಭ್ಯರ್ಥಿಗಳು ತಮ್ಮ ಸ್ವವಿವರ resume ಅನ್ನು [email protected] ನಲ್ಲಿ‌ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ.ಸಂ.08232-295010, ಮೊ.9164443223, 8152882461 ಯನ್ನು ಸಂಪರ್ಕಿಸುವುದು. ಉದ್ಯೋಗ ಮೇಳದಲ್ಲಿ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು, ಇದಕ್ಕೆ ‌ಸಿದ್ಧತೆ ಮಾಡಿಕೊಳ್ಳಲಾಗಿದೆ. 

ಮುಖ್ಯ ಅತಿಥಿಗಳಾಗಿ ಸಂಸದೆ ಸುಮಲತಾ ಅಂಬರೀಶ್, ಶಾಸಕರಾದ ಮರಿತಿಬ್ಬೇಗೌಡ, ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಡಿ.ಸಿ ತಮ್ಮಣ್ಣ, ಸಿ.ಎಸ್. ಪುಟ್ಟರಾಜು, ಸುರೇಶ್‍ಗೌಡ, ಡಾ.ಕೆ.ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ನಗರಸಭೆ ಅಧ್ಯಕ್ಷ ಹೆಚ್.ಎಸ್.ಮಂಜು, ಉಪಾಧ್ಯಕ್ಷರಾದ ಇಷ್ರತ್ ಫಾತೀಮ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ಸಚಿವ ಡಾ.ಅಶ್ವಥ್ ನಾರಾಯಣ ಸಿ.ಎನ್ ಭಾಗವಹಿಸುವರು.

ವಿಶೇಷ ಆಹ್ವಾನಿತರಾಗಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಂ ರಾಯಪುರ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಆಯುಕ್ತರಾದ ಜ್ಯೋತಿ ಕೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಡಿ.ಗೌಡ ಹಾಗೂ ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಅಭಿಯಾನ ನಿರ್ದೇಶಕರಾದ ಡಾ.ರಾಗಪ್ರಿಯಾ.ಆರ್ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!