Monday, November 23, 2026

ಪ್ರಾಯೋಗಿಕ ಆವೃತ್ತಿ

ನಾಳೆ ಕೊಪ್ಪ ಬಂದ್ ಗೆ ಕರೆ ಕೊಟ್ಟ ರೈತಸಂಘ

ಕಬ್ಬು ಹಾಗೂ ಹಾಲಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಕಳೆದ ಒಂದೂವರೆ ತಿಂಗಳಿನಿಂದ ಮಂಡ್ಯ ನಗರದಲ್ಲಿ ಕರ್ನಾಟಕ ರಾಜ್ಯ ರೈತಸಂಘ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ರೈತ ಮುಖಂಡರು ಡಿ.23ರಂದು ಮದ್ದೂರು ತಾಲ್ಲೂಕಿನ ಕೊಪ್ಪ ಬಂದ್ ಗೆ ಕರೆ ನೀಡಿದ್ದಾರೆ.

ಅಂದು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೊಪ್ಪದ ವರ್ತಕರು, ವ್ಯಾಪಾರಿಗಳು, ವಿವಿಧ ಅಂಗಡಿ-ಮುಂಗಟ್ಟುಗಳ ಮಾಲೀಕರು ಸ್ವಯಂ ಪ್ರೇರಿತಗಾಗಿ ಅಂಗಡಿಗಳನ್ನು ಮುಚ್ಚಿ ಬಂದ್ ಆಚರಿಸುವಂತೆ ರೈತ ಮುಖಂಡರು ಮನವಿ ಮಾಡಿದ್ಧಾರೆ.

ಸರ್ಕಾರವು ರೈತರ ಬೆಳೆಗಳಿಗೆ ಬೆಲೆ ನಿಗದಿಪಡಿಸಲು ಮೀನಾಮೇಷ ಎಣಿಸುತ್ತಿದ್ದು, ಇದನ್ನು ಪ್ರತಿಭಟಿಸಿ ಸಾರ್ವಜನಿಕರು ಬಂದ್ ಆಚರಿಸುವ ಮೂಲರ  ರೈತರ ಹೋರಾಟಕ್ಕೆ ಬೆಂಬಲ ನೀಡುವಂತೆ ಇಂದು ನಡೆದ ರೈತ ಮುಖಂಡರ ಸಭೆಯಲ್ಲಿ ಮನವಿ ಮಾಡಿದರು.

ಸಭೆಯಲ್ಲಿ ರೈತ ಮುಖಂಡರಾದ ಕೀಳಘಟ್ಟ ನಂಜುಂಡಯ್ಯ, ಉಮೇಶ್ ಹುರುಗಲವಾಡಿ, ಚನ್ನಪ್ಪ, ಚಂದ್ರು ಹರಳಕೆರೆ, ಗೂಳೂರು ನಿಂಗರಾಜು, ಅರಗಿನಮೇಳೆ ರಾಮೇಗೌಡ, ಅಬಲವಾಡಿ ತಿಮ್ಮೇಶ್, ಜಗದೀಶ್, ಬಿದರಕೋಟೆ ರಮೇಶ್, ಮಹಮದ್ ಇಲಿಯಾಜ್ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ