ಮಂಡ್ಯ ನಗರದ ಜಿಲ್ಲಾಧಿಕಾರಿ ನಿವಾಸದ ಪಕ್ಕದಲ್ಲಿರುವ ತೋಟಗಾರಿಕೆ ಇಲಾಖೆಯ ಆವರಣದ ಮುನೇಶ್ವರ ಸೇವಾ ಸಮಿತಿಯಿಂದ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಫೆ.19ರಂದು ಭಾನುವಾರ ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 3.30ರವರೆಗೆ ಮುನೇಶ್ವರಸ್ವಾಮಿಗೆ ವಿಶೇಷ ಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಭಕ್ತಾಧಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಬೇಕೆಂದು ಮುನೇಶ್ವರ ಸೇವಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.




