Sunday, March 3, 2024

ಪ್ರಾಯೋಗಿಕ ಆವೃತ್ತಿ

ಬಿಜೆಪಿಯಿಂದ ದೇಶ ರಕ್ಷಿಸಲು ಕಾಂಗ್ರೆಸ್ ಬೆಂಬಲಿಸಿ

ದೇಶದಲ್ಲಿ ಅಶಾಂತಿ,ಅರಾಜಕತೆ ಸೃಷ್ಟಿಸಿ ದುರಾಡಳಿತ ನಡೆಸುತ್ತಿರುವ ಬಿಜೆಪಿಯಿಂದ ದೇಶ ರಕ್ಷಿಸಲು ಕಾಂಗ್ರೆಸ್ ಬೆಂಬಲಿಸಬೇಕೆಂದು ಜನರಿಗೆ ಮನವರಿಕೆ ಮಾಡಿಕೊಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಮಾಜಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಕರೆ ನೀಡಿದರು.

ಮಳವಳ್ಳಿ ಪಟ್ಟಣದ ರೈತ ಸಮುದಾಯ ಭವನದಲ್ಲಿ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಸಂಬಂಧ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ಪೂರ್ವಭಾವಿ ಸಭೆ ಹಾಗೂ ರಾಜೀವ್ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ದೇಶದಲ್ಲಿ ಅಭಿವೃದ್ಧಿ ರಾಜಕಾರಣ ನಡೆಯುತ್ತಿಲ್ಲ. ಧರ್ಮಗಳ ನಡುವೆ ದ್ವೇಷ ತುಂಬುವ ರಾಜಕಾರಣ ನಡೆಯುತ್ತಿದೆ.ಹಣದುಬ್ಬರ ಹೆಚ್ಚಾಗಿ ಜನರು ಬೆಲೆಯೇರಿಕೆಯಿಂದ ತತ್ತರಿಸಿದ್ದಾರೆ.ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.

ಹಿಂದಿನ ಚುನಾವಣೆಗಳಲ್ಲಿ ಅಭ್ಯರ್ಥಿಗಳನ್ನು ಕೊನೆ ಕ್ಷಣದಲ್ಲಿ ಘೋಷಣೆ ಮಾಡುತ್ತಿದ್ದರಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಿರಲಿಲ್ಲ.ಆದರೆ ಪ್ರಸಕ್ತ ಚುನಾವಣೆಯಲ್ಲಿ ಮಧು ಜಿ. ಮಾದೇಗೌಡರನ್ನು ಒಂದು ವರ್ಷ ಮುಂಚಿತವಾಗಿಯೇ ಘೋಷಿಸುವುದರ ಜೊತೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿ ಮಾಡಿಸಿರುವುದರಿಂದ ವಿಧಾನಪರಿಷತ್ ಚುನಾವಣೆಯಲ್ಲಿ ಅವರು ಗೆಲುವು ಸಾಧಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಮಳವಳ್ಳಿ ತಾಲ್ಲೂಕಿನಲ್ಲಿ 8 ಸಾವಿರ ಮತದಾರರಿದ್ದು. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮತದಾರರನ್ನು ಸಂಪರ್ಕಿಸಿ ಬಿಜೆಪಿಯಿಂದ ದೇಶವನ್ನು ಉಳಿಸಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಬಗ್ಗೆ ಮನವರಿಕೆ ಮಾಡಿಕೊಡಬೇಕೆಂದು ಸಲಹೆ ನೀಡಿದರು.

ದೇಶಕ್ಕೆ ತಾಂತ್ರಿಕ ಯುಗವನ್ನು ಪರಿಚಯಿಸಿದ ಕೀರ್ತಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಗೆ ಸಲ್ಲುತ್ತದೆ. ದೇಶದಲ್ಲಿ ಟಿಜಿಟಲ್ ಯುಗ ಮುಂದುವರೆಯಲು ಕಾಂಗ್ರೆಸ್ ಪಕ್ಷ ಕಾರಣವಾಗಿದೆ ಎಂದರು.

ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಂಗಾಧರ್ ಮಳವಳ್ಳಿ ಚುನಾವಣೆ ಉಸ್ತುವಾರಿ ಅಜ್ಜಹಳ್ಳಿ ರಾಮಕೃಷ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಜೀವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವರಾಜು, ಸುಂದರ್ ರಾಜು, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನಾಗೇಶ್, ಚಿಕ್ಕಲಿಂಗಯ್ಯ, ಪ್ರಕಾಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಸುಷ್ಮಾರಾಜು, ಆರ್.ಎನ್ ವಿಶ್ವಾಸ್, ಸುಜಾತ ಕೆ.ಎಂ.ಪುಟ್ಟು,ಯೂತ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಮೂತಿ೯, ಪುರಸಭೆ ಸದಸ್ಯ ಶಿವಕುಮಾರ್, ಪುಟ್ಟರಾಮು, ಶಿವಶಂಕರ್ ಸೇರಿದಂತೆ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!