ಶುಭಾಶಯ ಕೋರಿದ ಚಲುವರಾಯಸ್ವಾಮಿ,ದಿನೇಶ್ ಗೂಳೀಗೌಡ
ಇಂದು ಮಂಡ್ಯ ಜಿಲ್ಲೆಯ ಹೆಮ್ಮೆಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣರವರು ಜನ್ಮದಿನ. ಅವರ ಜನ್ಮದಿನದ ಪ್ರಯುಕ್ತ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಎನ್. ಚಲುವರಾಯಸ್ವಾಮಿ,ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ರವರು, ಯುವ ಕಾಂಗ್ರೆಸ್ ಮುಖಂಡ ರಘುವೀರ್ ಗೌಡ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿ ಜನ್ಮದಿನದ ಶುಭಾಶಯ ಕೋರಿದರು.
ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಗೌರವ ಹೊಂದಿರುವ ಎಸ್.ಎಂ.ಕೃಷ್ಣರವರು ತಾವು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜನಪರ ಆಡಳಿತ ನೀಡಿದ್ದಾರೆ.