ಜೆಡಿಎಸ್ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಅಭಿವೃದ್ಧಿ ಕೊಡುಗೆಗಳನ್ನು ಆಧರಿಸಿ ಪದವೀಧರ ಮತದಾರರು ಎಚ್.ಕೆ.ರಾಮು ಅವರನ್ನು ಆಯ್ಕೆ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್ ಡಿ. ಕುಮಾರಸ್ವಾಮಿ ಮನವಿ ಮಾಡಿದರು.
ಭಾರತೀನಗರ ದೊಡ್ಡರಸಿನಕೆರೆ ಗೇಟ್ ಬಳಿ ಇರುವ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಸಂಜೆ ನಡೆದದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಪ್ರಚಾರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಜೆಡಿಎಸ್ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರ ಕ್ಕೆ ಅಪಾರ ಕೊಡುಗೆ ನೀಡಿದೆ.ಶಿಕ್ಷಕರ ನೇಮಕಾತಿ,ಶಾಲಾ ಕಾಲೇಜುಗಳ ಸ್ಥಾಪನೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ.ಆದರೆ ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷಗಳು ಸೇರಿ ಕುತಂತ್ರ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಚಡ್ಡಿ ಸುಡುವ ಕೀಳು ಮಟ್ಟದ ರಾಜಕಾರಣ ಮಾಡುತ್ತಿದೆ .ಆರ್ ಎಸ್ ಎಸ್ ಮಾತ್ರ ಚಡ್ಡಿ ಹಾಕುವುದಿಲ್ಲ.ನಮ್ಮ ರೈತರು ಪಟಾಪಟ್ಟಿ ಚಡ್ಡಿ ಹಾಕುತ್ತಾರೆ.ಚಡ್ಡಿ ಸುಡುವ ಹೇಳಿಕೆ ಸರಿಯಲ್ಲ ಎಂದರು.
ಮಂಡ್ಯ ಜಿಲ್ಲೆ ನನ್ನ ಹೃದಯವಿದ್ದಂತೆ. ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್. ಕೆ.ರಾಮು ಅವರನ್ನು ಮತ್ತು ವಿಧಾನ ಸಭೆ ಚುನಾವಣೆಯಲ್ಲಿ ಡಿ.ಸಿ.ತಮ್ಮಣ್ಣ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಶಾಸಕ ಡಿ.ಸಿ.ತಮ್ಮಣ್ಣ ಮಾತನಾಡಿ ರಾಜ್ಯಕ್ಕೆ ಪ್ರಾದೇಶಿಕ ಪಕ್ಷದ ಅವಶ್ಯಕತೆಯಿದ್ದು, ಕುಮಾರಸ್ವಾಮಿಯವರು ಎಚ್.ಕೆ.ರಾಮು ಅವರನ್ನು ಆಯ್ಕೆ ಮಾಡಿದ್ದಾರೆ. ಅವರನ್ನು ಅಧಿಕ ಮತಗಳಿಂದ ಜಯಶೀಲರನ್ನಾಗಿ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಮಾಜಿ ವಿದಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ,ಜಿಲ್ಲಾ ಅಧ್ಯಕ್ಷ ಡಿ. ರಮೇಶ್,ತಾಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ ಸೇರಿದಂತೆ ಜೆಡಿಎಸ್ ಮುಖಂಡರು ಹಾಜರಿದ್ದರು.