Thursday, September 19, 2024

ಪ್ರಾಯೋಗಿಕ ಆವೃತ್ತಿ

“ಇಂದಿನ ರೌಡಿಗಳೇ ಮುಂದಿನ ಬಿಜೆಪಿ ನಾಯಕರು” : ಬಿಜೆಪಿ ವಿರುದ್ಧ ಕಾಂಗ್ರೆಸ್ ಟ್ವೀಟ್ ಸಮರ

“ಇಂದಿನ ರೌಡಿಗಳೇ ಮುಂದಿನ ಬಿಜೆಪಿ ನಾಯಕರು”, ”ಹಿಂದೆ ರೌಡಿಗಳನ್ನು ಕಂಡರೆ ಪೊಲೀಸರು ಒದ್ದು ಎಳೆದು ತರುತ್ತಿದ್ದರು, ಈಗ ಬಿಜೆಪಿಯ ರೌಡಿ ರಾಜಕೀಯದಿಂದಾಗಿ ಅದೇ ರೌಡಿಗಳಿಗೆ ಪೊಲೀಸರು ಸೆಲ್ಯೂಟ್ ಹೊಡೆಯುವಂತಾಗಿದೆ”, ” ರೌಡಿಗಳ ವಿರುದ್ಧ ಕಾರ್ಯಾಚರಣೆ ನಡೆಸುವ ಪೊಲೀಸರ ನೈತಿಕ ಸ್ಥೈರ್ಯವನ್ನೇ ಬಿಜೆಪಿ ಕಿತ್ತುಕೊಂಡಿದೆ” ಎಂದು ಬಿಜೆಪಿಯ ”ರೌಡಿ ರಾಜಕೀಯ” ವಿರುದ್ಧ ಕರ್ನಾಟಕ ಕಾಂಗ್ರೆಸ್ ಪಕ್ಷ ಟ್ವೀಟರ್ ನಲ್ಲಿ  ಸಮರ ಸಾರಿದ್ದು, ಬಿಜೆಪಿ ವಿರುದ್ದ ಉಗ್ರವಾಗಿ ಪ್ರತಿಕ್ರಿಯಿಸಿದೆ.

 

“>

 

 

ಕೋಮು ರಾಜಕಾರಣ ಸಾಲದು ಎಂಬಂತೆ ರೌಡಿ ರಾಜಕೀಯ ಮಾಡಲು ಹೊರಟಿದೆ ಬಿಜೆಪಿ. ರಾಮರಾಜ್ಯದ ಹೆಸರು ಹೇಳುತ್ತಿದ್ದ ಬಿಜೆಪಿ ನಾಯಕರು ರೌಡಿ ರಾಜ್ಯ ಮಾಡಲು ಹೊರಟಿದ್ದಾರೆ. ಅಪ್ಪು ಎಂಬ ರೌಡಿ ಮೇಲಿದ್ದ ರೌಡಿ ಶೀಟ್ ತೆಗೆಸಿ ರಾಜಕಾರಿಣಿಯ ಮುಖವಾಡ ತೋಡಿಸಿದ್ದೇಕೆ ? ಎಂದು ಕಾಂಗ್ರೆಸ್ ಟೀಕಿಸಿದೆ.

ಅಬಿಜೆಪಿ ಸೇರುವ ಎಲ್ಲಾ ರೌಡಿಗಳ ಕೇಸ್‌ಗಳನ್ನೂ ಮನ್ನಾ ಮಾಡುವಿರಾ? ಸದ್ದಿಲ್ಲದೆ ಬಿಜೆಪಿಯ ರೌಡಿ ಮೋರ್ಚಾ ರೂಪುಗೊಳ್ಳುತ್ತಿದೆ. ಜೈಲಿನಲ್ಲಿರಬೇಕಾದವರು ಬಿಜೆಪಿ ಕಚೇರಿಯಲ್ಲಿದ್ದಾರೆ. ರೌಡಿಗಳಿಗೆ ಪ್ರೋತ್ಸಾಹಿಸುವುದಿಲ್ಲ ಎಂದು ಯೂಟರ್ನ್ ಸ್ಟೇಟ್ಮೆಂಟ್ ನೀಡಿದ್ದ ಬಿಜೆಪಿ ನಾಯಕರೇ, ಆನೇಕಲ್‌ ಪುರಸಭೆಗೆ ರೌಡಿ ಶೀಟರ್‌ನನ್ನು ನಿಮ್ಮದೇ ಸರ್ಕಾರ ನಾಮನಿರ್ದೇಶನ ಮಾಡಿರುವುದೇಕೆ? ದಮ್ಮು ತಾಕತ್ತಿದ್ದರೆ ಉತ್ತರಿಸಿ ಎಂದು ಪ್ರಶ್ನೆ ಮಾಡಿದೆ.

ಸಿಎಂ ಬೊಮ್ಮಾಯಿಯವರು ದಮ್ಮು, ತಾಕತ್ತು ಇದ್ರೆ ಬನ್ನಿ ಎಂದು ರೌಡಿಸಂ ಭಾಷೆಯಲ್ಲಿ ಸವಾಲು ಹಾಕಿದ್ದರ ಹಿಂದೆ ನೈಜ ರೌಡಿಸಂ ಇದೆ ಎಂದು ಈಗ ಬೆಳಕಿಗೆ ಬರುತ್ತಿದೆ. ರೌಡಿ ಮೋರ್ಚಾ ಕಟ್ಟಿಕೊಂಡು ಈ ಸವಾಲು ಹಾಕಿದಿರಾ ಬಿಜೆಪಿ ನಾಯಕರೇ ? ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ, ಬೊಮ್ಮಾಯಿಯವರು ರೌಡಿಗಳಿಗೆ ಮಹಾಗುರುವಿನಂತೆ ಆಗಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!