ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯ ಮಳವಳ್ಳಿ ಬಳಿಯ ಟೋಲ್ ಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೆದ್ಧಾರಿಯಲ್ಲಿ ಹಲವು ನ್ಯೂನ್ಯತೆಗಳಿವೆ, ಆದರೂ ಸಾರ್ವಜನಿಕರಿಂದ ಟೋಲ್ ವಸೂಲಿ ಮಾಡಲಾಗುತ್ತಿದೆ ಎಂದು ಸ್ಥಳೀಯ ಜನಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಬಗ್ಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ನರೇಂದ್ರಸ್ವಾಮಿ ರಾಷ್ಟೀಯ ಹೆದ್ಧಾರಿ ಪ್ರಾಧಿಕಾರದ ಗಮನ ಸೆಳೆದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿ ಭೇಟಿ ಮಹತ್ವದ್ದಾಗಿದೆ.
ಇದಲ್ಲದೇ ಮಳವಳ್ಳಿ ಪ್ರವಾಸಿ ಮಂದಿರದ ಬಳಿ ಸುಗಮ ಸುಗಮ ಸಂಚಾರ ವ್ಯವಸ್ಥೆ ಕುರಿತು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ, ತಹಶೀಲ್ದಾರ್ ಲೋಕೇಶ್ ಉಪಸ್ಥಿತರಿದ್ದರು.




