Saturday, May 18, 2024

ಪ್ರಾಯೋಗಿಕ ಆವೃತ್ತಿ

ನಾಳೆ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ

ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಶಾಖೆ ರಾಜ್ಯ ಸರ್ಕಾರಿ ನೌಕರರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ 2022-23 ನೇ ಸಾಲಿನ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕಂತಿಕ ಸ್ಪರ್ಧೆಗಳು ಮತ್ತು ಪ್ರತಿಭಾ ಪುರಸ್ಕಾರ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳು ಜ.3 ಮತ್ತು 4 ರಂದು ನಡೆಯಲಿವೆ.

ಮಂಡ್ಯನಗರದ ಪಿ.ಇ.ಟಿ.ಕ್ರೀಡಾ ಸಮುಚ್ಛಯದಲ್ಲಿ ಜ.3ರಂದು ಬೆಳಿಗ್ಗೆ 10 ಗಂಟೆಗೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು. ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ಕೆ.ಸಿ.ನಾರಾಯಣ ಗೌಡ ಧ್ವಜಾರೋಹಣ ಮಾಡುವರು. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ವಕ್ಷ ಸಿ.ಎಸ್.ಷಡಾಕ್ಷರಿ ಕ್ರೀಡಾಜ್ಯೋತಿ ಸ್ವೀಕಾರ ಮಾಡುವರು.

ಮುಖ್ಯ ಅತಿಥಿಗಳಾಗಿ ಸಂಸದೆ ಸುಮಲತಾ ಅಂಬರೀಶ್, ಶಾಸಕರಾದ ಮರಿತಿಬ್ಬೇಗೌಡ, ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ಸುರೇಶ್‍ಗೌಡ, ಡಾ.ಕೆ.ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ನಗರಸಭೆ ಅಧ್ಯಕ್ಷ ಹೆಚ್.ಎಸ್.ಮಂಜು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ಮೈಷುಗರ್ ಕಂಪನಿ ಅಧ್ಯಕ್ಷ ಪಂಕಜ್‍ಕುಮಾರ್ ಪಾಂಡೆ, ಕಾವೇರಿ ಅಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಜಿ. ನಿಜಗುಣರಾಜು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ ರಾಯಪುರ, ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ, ಆರಕ್ಷಕ ಅಧೀಕ್ಷಕ ಎನ್ ಯತೀಶ್, ಜಿ.ಪಂ.ಸಿ.ಇ.ಒ.ಶಾಂತ ಎಲ್.ಹುಲ್ಮನಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗವಹಿಸುವರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!