Tuesday, May 21, 2024

ಪ್ರಾಯೋಗಿಕ ಆವೃತ್ತಿ

ನಾಳೆ ರಾಷ್ಟ್ರೀಯ ಯುವ ದಿನ – ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ 

ಮಂಡ್ಯ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಹಾಗೂ ಎನ್.ಎಸ್.ಎಸ್ ಘಟಕ ಇವರ ಸಹಯೋಗದೊಂದಿಗೆ 2023ರ ಜ.12 ರಂದು ಬೆಳಿಗ್ಗೆ 10 ಗಂಟೆಗೆ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ ಹಾಗೂ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಕಾರ್ಯಕ್ರಮ ಉದ್ಘಾಟಿಸುವರು. ರೇಷ್ಮೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ಕೆ.ಸಿ.ನಾರಾಯಣ ಗೌಡ ಉಪಸ್ಥಿತರಿರುವರು. ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದೆ ಸುಮಲತಾ ಅಂಬರೀಶ್ ಭಾಗವಹಿಸುವರು.

ಶಾಸಕರಾದ ಮರಿತಿಬ್ಬೇಗೌಡ, ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ಸುರೇಶ್‍ಗೌಡ, ಡಾ.ಕೆ.ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ನಗರಸಭೆ ಅಧ್ಯಕ್ಷ ಹೆಚ್.ಎಸ್.ಮಂಜು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ ರಾಯಪುರ, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ ಕೆ.ನಾಗಣ್ಣಗೌಡ, ನಗರಸಭೆಯ ಉಪಾಧ್ಯಕ್ಷ ಇಷ್ರತ್ ಫಾತೀಮಾ, ಜಿಲ್ಲಾಧಿಕಾರಿ ಡಾ. ಹೆಚ್.ಎನ್.ಗೋಪಾಲಕೃಷ್ಣ, ಆರಕ್ಷಕ ಅಧೀಕ್ಷಕ ಎನ್ ಯತೀಶ್, ಜಿ.ಪಂ.ಸಿ.ಇ.ಒ. ಶಾಂತ ಎಲ್.ಹುಲ್ಮನಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಓಂ ಪ್ರಕಾಶ್.ಜಿ. ಮತ್ತಿತರರು ಭಾಗವಹಿಸುವರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!