ಕಾಂಗ್ರೆಸ್ ಪಕ್ಷದ ಯುವ ನಾಯಕ ರಾಹುಲ್ ಗಾಂಧಿ ಅವರು ಕೈಗೊಂಡಿರುವ ಭಾರತ ಒಗ್ಗೂಡಿಸಿ ಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸೆ.17ರಂದು ಮಂಡ್ಯನಗರಕ್ಕೆ ಆಗಮಿಸಲಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಮಂಡ್ಯನಗರದ ಕಲ್ಲಹಳ್ಳಿ ಸಮೀಪದ ಸುಮಾ ರವಿ ಸಮುದಾಯ ಭವನದಲ್ಲಿ ಕಾಂಗ್ರೆಸ್ ಪೂರ್ವಭಾವಿ ಸಭೆ ನಡೆಯಲಿದ್ದು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಟಿ.ಗಂಗಾಧರ್ ಮನವಿ ಮಾಡಿದ್ದಾರೆ.




