Thursday, September 19, 2024

ಪ್ರಾಯೋಗಿಕ ಆವೃತ್ತಿ

ನಾಳೆ ಶಿವಪುರ ಸತ್ಯಾಗ್ರಹ ಸೌಧದಲ್ಲಿ ಕೋಟಿ ಕಂಠ ಗಾಯನ

ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಅ.28 ರಂದು ಬೆಳಿಗ್ಗೆ 11 ಗಂಟೆಗೆ ಮದ್ದೂರು ತಾಲ್ಲೂಕು ಶಿವಪುರ ಸತ್ಯಾಗ್ರಹ ಸೌಧದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಮದ್ದೂರು ವಿಧಾನಸಭಾ ಕ್ಷೇತ್ರದ ಶಾಸಕ ಡಿಸಿ ತಮ್ಮಣ್ಣ ಅಧ್ಯಕ್ಷತೆ ವಹಿಸುವರು. ರೇಷ್ಮೆ,ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ಕೆ ಸಿ.ನಾರಾಯಣ ಗೌಡ ಉಪಸ್ಥಿತರಿರುವರು.

ಮುಖ್ಯ ಅತಿಥಿಗಳಾಗಿ ಸಂಸದೆ ಸುಮಲತಾ ಅಂಬರೀಶ್, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ವಿಧಾನಸಭಾ ಸದಸ್ಯರಾದ ಸಿ.ಎಸ್.ಪುಟ್ಟರಾಜು, ಸುರೇಶ್‍ಗೌಡ, ಡಾ.ಕೆ.ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಎಂ.ಶ್ರೀನಿವಾಸ್, ಮದ್ದೂರು ಪುರಸಭೆಯ ಅಧ್ಯಕ್ಷ ಸುರೇಶ್ ಕುಮಾರ್, ಉಪಾಧ್ಯಕ್ಷೆ ಹೆಚ್.ಸುಮಿತ್ರ ರಮೇಶ್, ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಂ ರಾಯಪುರ  ಭಾಗವಹಿಸುವರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!