Friday, November 20, 2026

ಪ್ರಾಯೋಗಿಕ ಆವೃತ್ತಿ

ನಾಳೆ ಶ್ರೀರಂಗಪಟ್ಟಣ ಜಂಬೂಸವಾರಿ


  • ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ

  • ಜಗದ್ಗುರು ಸುತ್ತೂರು ಶ್ರೀಗಳಿಂದ  ದಸರಾ ಉದ್ಘಾಟನೆ

ಮಂಡ್ಯ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ವತಿಯಿಂದ ಸೆ.28 ರಿಂದ ಅ. 2 ರವರೆಗೆ ಶ್ರೀರಂಗಪಟ್ಟಣ ದಸರಾವನ್ನು ಹಮ್ಮಿಕೊಳ್ಳಲಾಗಿದ್ದು, ಸೆ.28ರಂದು ಮಧ್ಯಾಹ್ನ  2.15 ಗಂಟೆಗೆ ಕಿರಂಗೂರು ಬನ್ನಿ ಮಂಟಪದಲ್ಲಿ ನಂದಿ ಧ್ವಜ ಪೂಜೆ, ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ ಹಾಗೂ ಜಂಬೂಸವಾರಿ ಮೆರವಣಿಗೆಯೊಂದಿಗೆ ಪ್ರಾರಂಭವಾಗಲಿದೆ.

ಸುತ್ತೂರು ಶ್ರೀ ಕ್ಷೇತ್ರದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಮಧ್ಯಾಹ್ನ 3 ಗಂಟೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ದಸರಾ ಉದ್ಘಾಟಿಸುವರು. ಅಬಕಾರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ , ರೇಷ್ಮೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ಕೆ ಸಿ.ನಾರಾಯಣ ಗೌಡ, ಸಹಕಾರ ಸಚಿವ ಎಸ್.ಐ ಸೋಮಶೇಖರ್,  ಮುಜರಾಯಿ ಹಾಗೂ ಹಜ್ ಮತ್ತು ವಕ್ಸ್ ಸಚಿವೆ ಶಶಿಕಲಾ ಜೊಲ್ಲೆ  ಉಪಸ್ಥಿತರಿರುವರು.  ಶ್ರೀರಂಗಪಟ್ಟಣ ಶಾಸಕ ಎ.ಎಸ್. ರವೀಂದ್ರ ಶ್ರೀಕಂಠಯ್ಯ ಅಧ್ಯಕ್ಷತೆ ವಹಿಸುವರು.

ಸೆ.29 ರಂದು ಸಂಜೆ 6.30 ಕ್ಕೆ ಶ್ರೀ ರಂಗನಾಥ ವೇದಿಕೆಯಲ್ಲಿ  ಶ್ರೀರಂಗಪಟ್ಟಣ  ದಸರಾ ಸಾಂಸ್ಕøತಿಕ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ, ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ ಅವರ ದಿವ್ಯಾ ಸಾನಿಧ್ಯದಲ್ಲಿ ಕಾರ್ಯಕ್ರಮವನ್ನು ಕಂದಾಯ ಸಚಿವ ಆರ್ ಆಶೋಕ್ ಉದ್ಘಾಟಿಸುವರು.
ಅಬಕಾರಿ ಸಚಿವ ಗೋಪಾಲಯ್ಯ ದಸರಾ ಕುರಿತು ಮಾತನಾಡುವರು.

ಶ್ರೀರಂಗ ವೇದಿಕೆಯಲ್ಲಿ ಪ್ರತಿದಿನ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಲಾ ಪ್ರದರ್ಶನ ಹಾಗೂ ಸಂಗೀತ ರಸ ಸಂಜೆಯಲ್ಲಿ  ಖ್ಯಾತ ನಟ, ನಟಿಯರು, ಗಾಯಕ, ಗಾಯಕಿಯರಿಂದ ಆಕ‍ರ್ಷಕ ಹಾಗೂ ವಿಭಿನ್ನ ಸಾಂಸ್ಕೃತಿಕ ಕಾರ್ಯಕ್ರಮ ನಡೆಲಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ