Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಟ್ರಾಕ್ಟರ್ -ಬೈಕ್ ಡಿಕ್ಕಿ : ಸೆಕ್ಯೂರಿಟಿ ಗಾರ್ಡ್ ಸಾವು

ಮಂಡ್ಯ ತಾಲ್ಲೂಕಿನ ಹೊಳಲು ಸಮೀಪ ಬುಧವಾರ ರಾತ್ರಿ ಟ್ರಾಕ್ಟರ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ.

ಮಂಡ್ಯ ತಾಲ್ಲೂಕಿನ ಶಿವಳ್ಳಿ ಗ್ರಾಮದ ಬಸವರಾಜು (40) ಮೃತಪಟ್ಟ ವ್ಯಕ್ತಿ. ಈತ ಮಂಡ್ಯದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ತನ್ನ ಕೆಲಸ ಮುಗಿಸಿಕೊಂಡು ಮಂಡ್ಯದಿಂದ ಶಿವಳ್ಳಿಗೆ ಬೈಕಿನಲ್ಲಿ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಕಬ್ಬು ತುಂಬಿಕೊಂಡು ಬರುತ್ತಿದ್ದ ಟ್ರಾಕ್ಟರ್ ಡಿಕ್ಕಿ ಹೊಡೆದು ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮಂಡ್ಯ ಪೊಲೀಸರು ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!