Thursday, November 19, 2026

ಪ್ರಾಯೋಗಿಕ ಆವೃತ್ತಿ

ಟ್ರಾಮಾ ಕೇರ್ ಸೆಂಟರ್ ಗೆ ಜಾಗ ನೀಡಲು ಸಿದ್ದ : HDK ಪತ್ರಕ್ಕೆ ಶಾಸಕ ರವಿಕುಮಾರ್ ಪ್ರತಿಕ್ರಿಯೆ

ಮಂಡ್ಯ ಜಿಲ್ಲಾ ಕೇಂದ್ರದಲ್ಲಿ ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ 2 ಎಕರೆ ಜಾಗ ಕೇಳಿ ಮಂಡ್ಯ ಸಂಸದ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ, ಜಾಗ ನೀಡಲು ತಾವು ಸಿದ್ದ ಎಂದು ಮಂಡ್ಯ ಶಾಸಕ ರವಿಕುಮಾರ್ ಗಣಿಗ ತಿಳಿಸಿದ್ದಾರೆ.

ಮಂಡ್ಯನಗರದ ಬಂದೀಗೌಡ ಬಡಾವಣೆಯ ತಮ್ಮ ನಿವಾಸದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲೇ ಟ್ರಾಮಾ ಸೆಂಟರ್, ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಬೇಕೆಂಬುದು ಜನರ ಬಯಕೆಯಾಗಿದೆ. ಅದಕ್ಕೆ ರಾಜ್ಯ ಸರ್ಕಾರ ಸೂಕ್ತ ಜಾಗ ನೀಡಬೇಕು. ತುರ್ತಾಗಿ ಪ್ರಸ್ತಾವನೆಯೊಂದನ್ನು ಕಳುಹಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ಅವರ ಆಸೆಯಂತೆ ಮಂಡ್ಯ ಜಿಲ್ಲಾ ಆರೋಗ್ಯ ಅಧಿಕಾರಿ ಕಚೇರಿ ಆವರಣದ 2 ಎಕರೆ ಜಾಗ ನೀಡಲು ತಾವು ಸಿದ್ದ ಎಂದು ಘೋಷಿಸಿದರು.

ಮಂಡ್ಯ ನಗರದಲ್ಲಿ ಟ್ರಾಮಾ ಸೆಂಟರ್ ತೆರೆಯಲು ಜಾಗ ನೀಡಿದರೆ ಕೇಂದ್ರದಿಂದ ಅನುಮೋದನೆ ದೊರಕಿಸಿಕೊಡುವುದಾಗಿ ಎಚ್ ಡಿ ಕುಮಾರಸ್ವಾಮಿ ಭರವಸೆ ನೀಡಿರುವುದು ಸ್ವಾಗತಾರ್ಹ, ಮಿಮ್ಸ್ ಆಸ್ಪತ್ರೆಯ ಪಕ್ಕದಲ್ಲಿರುವ ತಮಿಳು ಕಾಲೋನಿಯ ಜಾಗದ ಸಂಬಂಧ ನ್ಯಾಯಾಲಯದಲ್ಲಿ ದಾವೆ ಇರುವುದರಿಂದ ಅ ಸ್ಥಳದಲ್ಲಿ ಟ್ರಾಮಾ ಸೆಂಟರನ್ನು ತೆರೆಯಲು ಸಾದ್ಯವಾಗುತ್ತಿಲ್ಲ. ಹಾಗಾಗಿ ಉದ್ದೇಶಿತ ಟ್ರಾಮಾ ಸೆಂಟ‌ರ್ ಅನ್ನು ಜಿಲ್ಲಾ ಆರೋಗ್ಯಾಧಿಕಾರಿಗಳ ಕಛೇರಿಯ ಆವರಣದಲ್ಲಿ ತೆರೆಯಲು ಅವಶ್ಯವಾದ ಜಾಗದ ಲಭ್ಯತೆ ಇದ್ದು, ಅ ಜಾಗವನ್ನು ನೀಡಲು ಸಿದ್ಧರಿದ್ದೇವೆ ಎಂದರು.

ಗೋಷ್ಠಿಯಲ್ಲಿ ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ತಾ.ಪಂ.ಮಾಜಿ ಅಧ್ಯಕ್ಷ ತ್ಯಾಗರಾಜು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ