Tuesday, April 30, 2024

ಪ್ರಾಯೋಗಿಕ ಆವೃತ್ತಿ

ಜೂನ್ 1ರಿಂದಲೇ KSRTC ಬಸ್ ಪ್ರಯಾಣ ಉಚಿತ ; ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮುನ್ಸೂಚನೆ

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಗ್ರಾರಂಟಿ ಭರವಸೆ ನೀಡಿದಂತೆಯೇ ಜೂನ್ 1ರಿಂದಲೇ ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಜಾರಿಗೆ ತರುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮುನ್ಸೂಚನೆ ನೀಡಿದ್ದಾರೆ.

ಇಂದು KSRTC ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಕುರಿತು ನಾಳೆ ಸಿಎಂಗೆ ವರದಿ ಸಲ್ಲಿಸಲಾಗುವುದು.“ಇಂದಿನ ಸಭೆಯಲ್ಲಿ ಸಾರಿಗೆ ಅಧಿಕಾರಿಗಳು ಮೂರ್ನಾಲ್ಕು ಆಯ್ಕೆಗಳನ್ನು ಕೊಟ್ಟಿದ್ದಾರೆ. ಇವನ್ನು ನಾಳೆ ಮತ್ತು ಗುರುವಾರ ನಡೆಯುವ ಸಂಪುಟ ಸಭೆಯಲ್ಲಿ ಮಂಡಿಸುತ್ತೇನೆ. ಕಂಡಿಷನ್ ಬಗ್ಗೆ ಸರ್ಕಾರ ಹೇಳಲಿ, ಆದ್ರೆ ಎಲ್ಲಾ ಮಹಿಳೆಯರಿಗೆ ಉಚಿತ ಅನ್ನೋದು ಪ್ರಣಾಳಿಕೆಯಾಗಿತ್ತು, ಅದರಂತೆ ಗ್ಯಾರಂಟಿ ಜಾರಿಯಾಗಲಿದೆ ಎಂದು ಸ್ಪಷ್ಟಪಡಿಸಿದರು.

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, “ನಾಳೆ ಉಚಿತ ಬಸ್‌ ಪ್ರಯಾಣ ಗ್ಯಾರಂಟಿ ಜಾರಿಗೆ ಬರೋದ್ರಲ್ಲಿ ಅನುಮಾನವೇ ಇಲ್ಲ” ಎಂದಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!