Thursday, September 19, 2024

ಪ್ರಾಯೋಗಿಕ ಆವೃತ್ತಿ

ಕ್ಷಯ ಮುಕ್ತ ಮಂಡ್ಯಕ್ಕೆ ಎಲ್ಲರ ಸಹಕಾರ ಅಗತ್ಯ: ಡಾ. ಆಶಾಲತಾ

2025ಕ್ಕೆ ಕ್ಷಯ ರೋಗ ಮುಕ್ತ ಮಂಡ್ಯ ಜಿಲ್ಲೆ ಮಾಡಲು ಪಣ ತೊಟ್ಟಿದ್ದು ,ಇದಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಎಂ ಎನ್ ಆಶಾಲತಾ ಹೇಳಿದರು.

ಶ್ರೀರಂಗಪಟ್ಟಣದ ತಾಲ್ಲೂಕಿನ ಕೆ ಶೆಟ್ಟಹಳ್ಳಿ ಗ್ರಾಮದ ಎ ಹೆಚ್ ಅಪಾರೆಲ್ ಪ್ರವೈಟ್ ಲಿಮಿಟೆಡ್ ಗಾರ್ಮೆಂಟ್ ಫ್ಯಾಕ್ಟರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿಗಳ ಕಛೇರಿ ಮಂಡ್ಯ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಕೆ ಶೆಟ್ಟಹಳ್ಳಿ ಆಯುಷ್ಮಾನ್ ಆರೋಗ್ಯ ಮಂದಿರ ವತಿಯಿಂದ ಆಯೋಜಿಸಿದ್ದ “ಕ್ಷಯರೋಗ ಅರಿವು”ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಭಾರತದಂತಹ ಅಭಿವೃದ್ಧಿ ರಾಷ್ಟ್ರಗಳಲ್ಲಿ ಕ್ಷಯರೋಗವು ಒಂದು ಪ್ರಮುಖ ಸಾರ್ವಜನಿಕ ಆರೋಗ್ಯ ಸಮಸ್ಯೆಯಾಗಿದ್ದು ಚಿಕಿತ್ಸೆ ಪಡೆಯದ ಕ್ಷಯ ರೋಗಿ ಕೆಮ್ಮುವುದರಿಂದ, ಸಿನುವುದರಿಂದ ಗಾಳಿ ಮುಖಾಂತರ ಆರೋಗ್ಯವಂತ ಮನುಷ್ಯನಿಗೆ ಹರಡುತ್ತದೆ ಆದ್ದರಿಂದ ನಿರಂತರವಾಗಿ ಒಂದು ವಾರಕ್ಕೂ ಹೆಚ್ಚು ಕೆಮ್ಮು,ಜ್ವರ, ಕಫದಲ್ಲಿ ರಕ್ತ ಬೀಳುವುದು, ತೂಕ ಕಡಿಮೆಯಾಗುವುದು,ಹಸಿವು ಆಗದಿರುವುದು, ಕತ್ತಿನಲ್ಲಿ,ಕಂಕುಳಲ್ಲಿ ಗಡ್ಡೆ ಕಾಣಿಸುವುದು ಮುಂತಾದ ಲಕ್ಷಣಗಳು ಕಂಡು ಬಂದರೆ ಕೂಡಲೇ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ತಪಾಷಣೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಆಡಳಿತ ವೈದ್ಯಾಧಿಕಾರಿ ಡಾ.ಉಷಾ ಎಂ ಎಸ್, ಬಿಪಿಎಂ ನವೀನ, ಡಿಪಿಸಿ ಹರ್ಷ, ಎಸ್ ಟಿ ಎಸ್ ಮಹೇಶ್, ಆರೋಗ್ಯ ನಿರೀಕ್ಷಣಾಧಿಕಾರಿ ಎಸ್ ಪಿ ಪಣಿಂದ್ರ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಮಮತಾ, ಫ್ಯಾಕ್ಟರಿಯ ಎಚ್ ಆರ್ ಚೇತನ್, ಪ್ರಫುಲ್ಲ ಇತರರು ಉಪಸ್ಥಿತರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!