Saturday, May 18, 2024

ಪ್ರಾಯೋಗಿಕ ಆವೃತ್ತಿ

ಕ್ಷಯರೋಗ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಅಗತ್ಯ

2025 ರ ವೇಳೆಗೆ ಕ್ಷಯರೋಗ ನಿರ್ಮೂಲನೆಯಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ ಹೇಳಿದರು.

ಶ್ರೀರಂಗಪಟ್ಟಣ ತಾಲ್ಲೂಕಿನ ಬಲ್ಲೆನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಬರುವ ಆರತಿ ಉಕ್ಕಡ ಗ್ರಾಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗೂ ಬಲ್ಲೆನಹಳ್ಳಿ ಆರೋಗ್ಯ ಕೇಂದ್ರದ ವತಿಯಿಂದ ನಡೆದ ಸಕ್ರಿಯ ಕ್ಷಯ ರೋಗ ಪತ್ತೆ ಹಾಗೂ ಚಿಕಿತ್ಸಾ ಆಂದೋಲನ ಮತ್ತು ತಂಬಾಕು ಉತ್ಪನ್ನಗಳ ಬಳಕೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮ ಕುರಿತ ಜಾಗೃತಿ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಕ್ಷಯ ಸಾಂಕ್ರಾಮಿಕ ರೋಗವಾಗಿದ್ದು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ, ರೋಗ ಪತ್ತೆಗಾಗಿ ಆರೋಗ್ಯಇಲಾಖೆ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರ ತಂಡ ಮನೆ ಮನೆ ಭೇಟಿ ನೀಡಿ ಪರೀಕ್ಷಿಸಬೇಕು. ವಾರಕ್ಕಿಂತ ಹೆಚ್ಚು ದಿನ ಕಫ ಸಹಿತ ಕೆಮ್ಮು, ಸಂಜೆ ವೇಳೆ ಜ್ವರ ಬರುವುದು, ಹಸಿವಾಗದಿರುವದು, ತೂಕ ಕಡಿಮೆ ಆಗುವುದು, ಇದರಲ್ಲಿ ಯಾವುದಾದರೂ ಒಂದು ಲಕ್ಷಣ ಕಂಡು ಬಂದಲ್ಲಿ ಕಫ ಪರೀಕ್ಷೆಗೆ ಒಳಪಡಿಸಿ ಕ್ಷಯ ಇದ್ದಲ್ಲಿ ಆಶಾ ಕಾರ್ಯಕರ್ತೆಯರಿಂದ ಮನೆ ಬಾಗಿಲಿಗೆ ಔಷಧಿ ನೀಡಲಾಗುತ್ತಿದ್ದು, ಇದರ ಉಪಯೋಗ ಪಡೆಯಬೇಕೆಂದರು.

ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮೋಹನ್ ಮಾತನಾಡಿ, ತಂಬಾಕು ಉತ್ಪನ್ನಗಳ ಬಳಕೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮ ಕುರಿತು ಆರೋಗ್ಯ ಶಿಕ್ಷಣ ನೀಡಿದರು.ಕಾರ್ಯಕ್ರಮದಲ್ಲಿ ಆರೋಗ್ಯ ಸಂದೇಶಗಳ ಫಲಕಗಳೊಂದಿಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು

ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಜ, ಆರೋಗ್ಯ ನಿರೀಕ್ಷಣಾಧಿಕಾರಿ ಸುವರ್ಣ, ಮುಖಂಡರಾದ ರಾಮು, ಆಕಾಶ್, ದರ್ಶನ, ರಾಜೇಂದ್ರ ಹಾಗೂ ಆಶಾ ಕಾರ್ಯಕರ್ತೆಯರಾದ ಲೀಲಾಮಣಿ, ಪ್ರಭಾ ಮತ್ತು ಮಕ್ಕಳ ತಾಯಂದಿರರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!