Thursday, September 19, 2024

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ| ಕ್ಷಯಮುಕ್ತ ಗ್ರಾ.ಪಂ.ಗಾಗಿ ವಿನೂತನ ಕಾರ್ಯಕ್ರಮ

2025 ರೊಳಗಾಗಿ ಕ್ಷಯ ಮುಕ್ತ ಮಂಡ್ಯ ಜಿಲ್ಲೆಯನ್ನಾಗಿ ಮಾಡಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕ್ಷಯ ರೋಗ ನಿರ್ಮೂಲನ ಅಧಿಕಾರಿ ಡಾ. ಆಶಾಲತಾ ಹೇಳಿದರು.

ಶ್ರೀರಂಗಪಟ್ಟಣ ತಾಲ್ಲೂಕಿನ ಸಬ್ಬನಕುಪ್ಪೆ ಗ್ರಾಮದಲ್ಲಿ, ಗ್ರಾಮ ಪಂಚಾಯ್ತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕೆ ಶೆಟ್ಟಹಳ್ಳಿ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು ಶ್ರೀರಂಗಪಟ್ಟಣ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನ ಕಾರ್ಯಕ್ರಮದಡಿ ಸಬ್ಬನಕುಪ್ಪೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ “ಕ್ಷಯ ಮುಕ್ತ ಗ್ರಾಮ ಪಂಚಾಯತಿ ಅಭಿಯಾನ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕ್ಷಯ ಸಾಂಕ್ರಾಮಿಕ ರೋಗವಾಗಿದ್ದು, ಗ್ರಾಮೀಣ ಮಟ್ಟದಿಂದಲೇ ಗಟ್ಟಿಗೊಳಿಸುವ ನಿಟ್ಟಿನಲ್ಲಿ “ಟಿ ಬಿ ಸೋಲಿಸಿ ,ಗ್ರಾಮ ಪಂಚಾಯಿತಿ ಗೆಲ್ಲಿಸಿ” ಎಂಬ ಧ್ಯೇಯ ವಾಕ್ಯದೊಂದಿಗೆ ಕ್ಷಯ ಮುಕ್ತ ಗ್ರಾಮ ಪಂಚಾಯತಿ ಅಭಿಯಾನ್ ಹಮ್ಮಿಕೊಳ್ಳಲಾಗಿದೆ. ಕ್ಷಯ ಪ್ರಾರಂಭದ ಹಂತದಲ್ಲಿ ಗುರುತಿಸಿ ಚಿಕಿತ್ಸೆ ಪಡೆದಲ್ಲಿ ಸಂಪೂರ್ಣ ಗುಣಪಡಿಸಬಹುದು ಎಂದರು.

ಆಡಳಿತ ವೈದ್ಯಾಧಿಕಾರಿ ಡಾ. ಉಷಾ ಎಂ ಎಸ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ್ ಕಾರ್ಯಕ್ರಮ ಕುರಿತು ಮಾತನಾಡಿದರು. ಕ್ಷಯ ಓಡಿಸಿ, ಗ್ರಾಮ ಪಂಚಾಯಿತಿ ಗೆಲ್ಲಿಸಿ” ಎಂಬ ವಿಷಯ ಕುರಿತು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ ಪ್ರತಿಜ್ಞಾ ವಿಧಿ ಬೋಧಿಸಿದರು .

ಕಾರ್ಯಕ್ರಮದಲ್ಲಿ ಗ್ರಾ ಪಂ ಅಧ್ಯಕ್ಷೆ ಬೃಂದಾಮಣಿ, ಉಪಾಧ್ಯಕ್ಷೆ ಮಂಗಳಮ್ಮ, ಸದಸ್ಯರಾದ ಸಾವಿತ್ರಮ್ಮ, ಲಕ್ಷ್ಮಮ್ಮ, ಶಂಕರಗೌಡ, ಪಿಡಿಒ ಮಹೇಶ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಜ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕಚೇರಿಯ ನವೀನ ಕುಮಾರ, ಪ್ರತಾಪ್ ಹಾಗೂ ಕ್ಷಯ ಮೇಲ್ವಿಚಾರಕ ಮಹೇಶ,ಆರೋಗ್ಯ ನಿರೀಕ್ಷಣಾಧಿಕಾರಿ ಪಣಿಂದ್ರ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪ್ರೇಮಾ, ಸಮುದಾಯ ಆರೋಗ್ಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!