Thursday, September 19, 2024

ಪ್ರಾಯೋಗಿಕ ಆವೃತ್ತಿ

ಪರೀಕ್ಷೆ ನಡೆದ ಮರುದಿನವೇ UGC-NET ಪರೀಕ್ಷೆ ರದ್ದುಗೊಳಿಸಿದ ಕೇಂದ್ರ ಸರ್ಕಾರ

ವಿಶ್ವವಿದ್ಯಾಲಯ ಅನುದಾನ ಆಯೋಗ – ರಾಷ್ಟ್ರೀಯ ಅರ್ಹತಾ ಪರೀಕ್ಷೆ(UGC-NET) ಪರೀಕ್ಷೆಯನ್ನು ನಡೆಸಿದ ಮರುದಿನವೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ರದ್ದುಗೊಳಿಸಲು ನಿರ್ಧರಿಸಿದೆ.

ಮಂಗಳವಾರ ನಡೆದ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆಯನ್ನು ಪಾವಿತ್ರ್ಯತೆಯನ್ನು ಉಳಿಸಿಕೊಳ್ಳಲು ಶಿಕ್ಷಣ ಸಚಿವಾಲಯವು UGC-NET ಜೂನ್ 2024 ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿರುವುದಾಗಿ ಉನ್ನತ ಶಿಕ್ಷಣ ಸಚಿವಾಲಯವು ಬುಧವಾರ ರಾತ್ರಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.

ಪರೀಕ್ಷೆಯಲ್ಲಿನ ಅಕ್ರಮ ನಡೆದಿದೆ ಎಂಬ ದೂರು ಬಂದ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ. ಜೂನ್ 18ರ ಮಂಗಳವಾರದಂದು UGC-NET ಪರೀಕ್ಷೆಯನ್ನು ದೇಶದಾದ್ಯಂತ 317 ನಗರಗಳಲ್ಲಿ 1205 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. 11 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಭಾರತೀಯ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಮತ್ತು/ಅಥವಾ ಜೂನಿಯರ್ ರಿಸರ್ಚ್ ಫೆಲೋಶಿಪ್ (JRF) ಹುದ್ದೆಗೆ ಅರ್ಹತೆಯನ್ನು ನಿರ್ಧರಿಸಲು UGC-NET ಅನ್ನು ನಡೆಸಲಾಗುತ್ತದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!