Monday, May 20, 2024

ಪ್ರಾಯೋಗಿಕ ಆವೃತ್ತಿ

ಉಮ್ಮಡಹಳ್ಳಿ : ಸ್ವಚ್ಛತಾ ಸೇವಾ ಆಂದೋಲನ

ಮಂಡ್ಯ ತಾಲ್ಲೂಕಿನ ಉಮ್ಮಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಸ್ವಚ್ಛತಾ ಹಿ ಸೇವಾ ಆಂದೋಲನ ಹಮ್ಮಿಕೊಳ್ಳಲಾಗಿತ್ತು.

ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಜಿಲ್ಲಾ ಎಸ್.ಹೆಚ್. ಸಮಾಲೋಚಕ ತಮ್ಮಣ್ಣ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಘನ ಮತ್ತು ದ್ರವ ತ್ಯಾಜ್ಯ ಹಾಗೂ ಅಪಾಯಕಾರಿ ತ್ಯಾಜ್ಯದ ಬಗ್ಗೆ ಮಾಹಿತಿಯನ್ನು ನೀಡಿದರು, ನಂತರ ಸ್ವಚ್ಛತಾ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲಾಯಿತು.

ಶಾಲಾ ಆವರಣದಲ್ಲಿ ಸ್ವಚ್ಛತಾ ಶ್ರಮದಾನವನ್ನು ಹಮ್ಮಿಕೊಂಡು ಪ್ರತಿಯೊಬ್ಬರಿಗೂ ಪಂಚಾಯಿತಿ ವತಿಯಿಂದ ಸ್ವಚ್ಛತಾ ಹಿ ಸೇವಾ ಅಕ್ಷರವುಳ್ಳ ಟೋಪಿಗಳನ್ನು ವಿತರಿಸಲಾಯಿತು. ಶಾಲಾ ಆವರಣದಲ್ಲಿ ಗಿಡ ನೆಟ್ಟು ನೀರೆರೆಯಲಾಯಿತು.

ಶಾಲಾ ವಿದ್ಯಾರ್ಥಿಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ ಕಾರ್ಯಕ್ರಮ ಹಮ್ಮಿಕೊಂಡು ಮನೆ ಮನೆಗಳಿಗೆ ಭೇಟಿ ನೀಡಿ, ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಹಾಗೂ ಹಸಿ-ಒಣ ಕಸಗಳನ್ನು ಮೂಲದಲ್ಲಿಯೇ ವಿಂಗಡಿಸುವ ಕುರಿತು ಮಾಹಿತಿ ಇರುವ ಕರಪತ್ರವನ್ನು ವಿತರಿಸುವ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಜಲಕ್ಷ್ಮಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್,  ಶಾಲೆಯ ಮುಖ್ಯ ಶಿಕ್ಷಕ ನಾಗರಾಜು, ಹೆಚ್.ಆರ್.ಡಿ. ಸಮಾಲೋಚಕ ಚನ್ನೇಗೌಡ IEC ಸಮಾಲೋಚಕ ಶಿವಕುಮಾರ್ ಉಪಸ್ಥಿತರಿದ್ದರು. ಸಹ ಶಿಕ್ಷರುಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!