Thursday, November 19, 2026

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ| ಅನಧಿಕೃತ ಮೊಬೈಲ್ ಟವರ್ ತೆರವಿಗೆ ಗ್ರಾಮಸ್ಥರ ಆಗ್ರಹ

ಶ್ರೀರಂಗಪಟ್ಟಣ ತಾಲೂಕಿನ ದೊಡ್ಡಪಾಳ್ಯ ಗ್ರಾಮದಲ್ಲಿ ಯಾವುದೇ ಅನುಮತಿ ಪಡೆಯದೆ ಅನಧಿಕೃತವಾಗಿ ಮೊಬೈಲ್ ಟವರ್ ಅಳವಡಿಸುತ್ತಿರುವುದು ಕಂಡುಬಂದಿದ್ದು ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ದೊಡ್ಡಪಾಳ್ಯ ಗ್ರಾಮದಲ್ಲೇ ಇರುವ ಮುಂಡುಗದೊರೆ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಮೊಬೈಲ್ ಟವರ್ ಅಳವಡಿಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದು, ಗ್ರಾಮಸಭೆಯಲ್ಲಿ ಚರ್ಚಿಸಿ ಅನುಮತಿ ಪತ್ರ ನೀಡುವ ಮೊದಲೇ ಗ್ರಾಮದಲ್ಲಿ ಅನಧಿಕೃತವಾಗಿ ಮೊಬೈಲ್ ಟವರ್ ತಲೆಯೆತ್ತಿ ನಿಂತಿರುವುದನ್ನು ಖಂಡಿಸಿ ಟವರ್ ಅನ್ನು ಗ್ರಾಮದಿಂದ ತೆರವುಗೊಳಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ.

ಮೊಬೈಲ್ ಬಳಕೆಯಿಂದಲೇ ಮನುಷ್ಯರು ಹಾಗೂ ಅತಿ ಹೆಚ್ಚು ಮಕ್ಕಳು ಈಗಾಗಲೇ ಮಾರಣಾಂತಿಕ ಹಲವಾರು ಕಾಯಿಲೆಗಳಿಂದ ಬಳಲುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ಖಾಸಗಿ ಕಂಪನಿಗಳು ಹಳ್ಳಿಗಳಿಗೂ ಲಗ್ಗೆ ಇಟ್ಟು ನಿರ್ಜನ ಪ್ರದೇಶದಲ್ಲಿ ಅಳವಡಿಸಬೇಕಾದ ತರಂಗಗಳ ಟವರ್ ಗಳನ್ನು ಗ್ರಾಮದ ನಡುವೆ ಅವೈಜ್ಞಾನಿಕವಾಗಿ ಅಳವಡಿಸುತ್ತಿದ್ದು, ಇದರಿಂದ ಹೊರಹೊಮ್ಮುವ ತರಂಗಗಳಿಂದ ಗ್ರಾಮದ ಜನಜಾನುವಾರುಗಳ ಆರೋಗ್ಯದ ಮೇಲೆ ಅತಿ ಹೆಚ್ಚು ದುಷ್ಪರಿಣಾಮ ಬೀರಿ ಹೃದಯಾಘಾತ, ಕ್ಯಾನ್ಸರ್, ಮೆದುಳು ಸಮಸ್ಯೆ ಅಂತಹ ಅನೇಕ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗ ಬೇಕಾಗುತ್ತದೆ, ಆದುದರಿಂದ ಗ್ರಾಮ ಪಂಚಾಯಿತಿಯಿಂದ ಯಾವುದೇ ಒಪ್ಪಿಗೆ ಪ್ರಮಾಣ ಪತ್ರ ನೀಡದೆ ಶೀಘ್ರವೆ ಟವರನ್ನು ತೆರವುಗೊಳಿಸುವಂತೆ ಡಿ.ಬಿ ರುಕ್ಮಾಂಗದ ಒತ್ತಾಯಿಸಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಮ್ಯಾ ಅವರಿಗೆ ಮನವಿ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ದೊಡ್ಡಪಾಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಡಿ.ಎಂ ಗೋಪಾಲ್, ಮಂಜು, ನವೀನ್ ಹಾಗೂ ರಾಕೇಶ್ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ