Thursday, September 19, 2024

ಪ್ರಾಯೋಗಿಕ ಆವೃತ್ತಿ

ಕೇಂದ್ರ ಗೃಹ ಸಚಿವ ಅಮಿತ್ ಶಾರಿಂದ ಮೆಗಾ ಡೇರಿ ಉದ್ಘಾಟನೆ

ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವ ಅಮಿತ್ ಶಾರವರು ಡಿಸೆಂಬರ್ 30ರಂದು ಬೆಳಿಗ್ಗೆ 10.30 ಕ್ಕೆ ಮೆಗಾ ಡೇರಿ ಉದ್ಘಾಟನೆ ಮಾಡಲಿದ್ದಾರೆ ಎಂದು ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಿ.ಆರ್.ರಾಮಚಂದ್ರು ತಿಳಿಸಿದರು.

ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿರುವ ಮನ್ಮುಲ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸಚಿವ ಅಮಿತ್ ಶಾರವರು ಉದ್ಘಾಟಿಸಲಿರುವ ಮೆಗಾ ಡೇರಿ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮಿಜಿ ವಹಿಸಲಿದ್ದು, ಸಮಾರಂಭವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದರು.

ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡರವರು ಜ್ಯೋತಿ ಬೆಳಗಿಸಿದರೆ, ಯು.ಎಚ್. ಟಿ ಕಟ್ಟಡವನ್ನು ಸಚಿವ ಕೆ. ಗೋಪಾಲಯ್ಯ ಉದ್ಘಾಟಿಸಲಿದ್ದಾರೆ. ಒಕ್ಕೂಟದ ಕೈಪಿಡಿಯನ್ನು ಸಚಿವ ಕೆ.ಸಿ. ನಾರಾಯಣಗೌಡ ಬಿಡುಗಡೆ ಮಾಡಲಿದ್ದು, ಹಾಲಿನ ಪುಡಿ ಘಟಕವನ್ನು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಉದ್ಘಾಟಿಸಲಿದ್ದಾರೆ.ಪಶು ಸಂಗೋಪನೆ ಸಚಿವ ಪ್ರಭು ಚ್ಹವಾಣ್ ನೂತನ ಬಾಯ್ಲರ್ ಘಟಕ ಉದ್ಘಾಟನೆ ಮಾಡಲಿದ್ದು, ಕರ್ನಾಟಕ ಸಹಕಾರ ಹಾಲು ಮಹಾಮಂಡಳದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೂತನ ರೆಫ್ರೆಜರೇಷನ್ ಘಟಕ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್‌ ಯಡಿಯೂರಪ್ಪ, ಎಚ್. ಡಿ. ಕುಮಾರಸ್ವಾಮಿ, ಎಸ್.ಎಂ. ಕೃಷ್ಣ ಭಾಗವಹಿಸಲಿದ್ದು, ಸಂಸದೆ,ಶಾಸಕರು, ವಿಧಾನ ಪರಿಷತ್ ಸದಸ್ಯರು, ಆಡಳಿತ ಮಂಡಳಿಯ ನಿರ್ದೇಶಕರು,ಅಧಿಕಾರಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮನ್ಮುಲ್ ಉಪಾಧ್ಯಕ್ಷ ರಘುನಂದನ್, ನಿರ್ದೇಶಕರಾದ ಎಂ.ರೂಪ, ಕೋಟಿ ರವಿ, ನೆಲ್ಲಿಗೆರೆ ಬಾಲು, ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ಆರ್.ಮಂಜೇಶ್ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!