Thursday, November 19, 2026

ಪ್ರಾಯೋಗಿಕ ಆವೃತ್ತಿ

ಬೆಂಗಳೂರು – ಮೈಸೂರು ಹೆದ್ದಾರಿಗೆ ಮತ್ತೊಬ್ಬ ಅಪರಿಚಿತ ಬಲಿ

ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಹನಕೆರೆ ಗ್ರಾಮದ ಬಳಿಯ ಹೆದ್ದಾರಿಯಲ್ಲಿ ಕಳೆದ ಸೋರಾತ್ರಿ 8.30 ಗಂಟೆಯಲ್ಲಿ ಜರುಗಿದೆ. 55 ವರ್ಷದ ಅಪರಿಚಿತ ವ್ಯಕ್ತಿ ಮೃತಪಟ್ಟವರು.

ಹನಕೆರೆ ಗ್ರಾಮದ ಭಾರತ್ ಪೆಟ್ರೋಲ್ ಬಂಕ್ ಹತ್ತಿರ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ವ್ಯಕ್ತಿಯ ತಲೆಯ ಹಿಂಭಾಗ, ಬಲ ಕಾಲು ತುಂಡಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ಮಾಡಿದ್ದ ಕಾರು ಪರಾರಿಯಾಗಿದ್ದು, ಕಾರಿನ ನಂಬರ್ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ 112 ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.

ಶವವನ್ನು ಮಂಡ್ಯ ಮಿಮ್ಸ್ ಅಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ಘಟನೆ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ ನಡೆದ 2 ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಅಪರಿಚಿತರು ಮೃತಪಟ್ಟಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ