Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ | ಅವೈಜ್ಞಾನಿಕ ಕಾಮಗಾರಿಯಿಂದ ಹತ್ತಾರು ಜನ ಬಲಿ : ಆರೋಪ

ಮಳವಳ್ಳಿ ಪಟ್ಟಣದ ಟೋಲ್ ಗೇಟ್ ಬಳಿ ಸರ್. ಎಂ.ವಿಶ್ವೇಶ್ವರಯ್ಯ ಪ್ರತಿಮೆ ವೃತ್ತದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದ ಕೂಡಿದ್ದು, ಇತ್ತೀಚಿನ ದಿನಗಳಿಂದ ಸುಮಾರು 10ರಿಂದ 15 ಜನರು ಸಾವನ್ನಪ್ಪಿದ್ದಾರೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಎಂ.ಎ.ಚಿಕ್ಕರಾಜು ಆರೋಪಿಸಿದರು.

ಈ ಸಂಬಂಧ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವೇಶ್ವರಯ್ಯ ಪ್ರತಿಮೆ ಇರುವ ವೃತ್ತದಲ್ಲಿ ಪೇಟೆ ಬೀದಿಗೆ ಹೋಗುವ, ರಾಷ್ಟ್ರೀಯ ಹೆದ್ದಾರಿಗೆ ತೆರಳುವ ಮಾರ್ಗಗಳಿದ್ದು, ಅವುಗಳನ್ನು ಅವೈಜ್ಞಾನಿಕವಾಗಿ ನಿರ್ಮಿಸಿರುವುದರಿಂದ ಪದೇ ಪದೇ ಅಪಘಾತಗಳಾಗುತ್ತಿವೆ. ಈಗಾಗಲೇ ಈ ವೃತ್ತದ ಬಳಿ ಸುಮಾರು 10 ರಿಂದ 15 ಜನರು ಸಾವನ್ನಪ್ಪಿದ್ದಾರೆ. ಹಲವು ಜನರು ಗಾಯಗೊಂಡಿದ್ದಾರೆ. ಇದಕ್ಕೆಲ್ಲ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೇ ಕಾರಣರಾಗಿದ್ದಾರೆ ಜೊತೆಗೆ ಇತ್ತೀಚಿನ ದಿನಗಳಲ್ಲಿ ಹಲಗೂರು ಇಂದ ಮಳವಳ್ಳಿ ಪಟ್ಟಣದವರೆಗೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಆರೋಪಿಸಿದರು.

ಕೂಡಲೇ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಂಡು, ಹೆದ್ದಾರಿ ಮಧ್ಯ ಭಾಗದಲ್ಲಿ ಡಿವೈಡ‌ರ್ ಆಳವಡಿಸಬೇಕು. ಏಕ ಮುಖ ಸಂಚಾರ ಮಾಡಬೇಕು, ಸಂಚಾರ ನಿಯಮಗಳ ಫಲಕ ಅಳವಡಿಸಬೇಕು, ಸಿಗ್ನಲ್ ದೀಪ ಅಳವಡಿಸಬೇಕು. ಇಲ್ಲದಿದ್ದರೆ ಪ್ರತಿ ದಿನ ಇಲ್ಲಿ ನಡೆಯುವ ಅಪಘಾತದಲ್ಲಿ ಗಾಯಗೊಂಡವರ, ಸಾವನ್ನಪ್ಪಿದವರ ಗೋಳು ಹೇಳತೀರದಾಗಿದೆ ಎಂದು

ಅವೈಜ್ಞಾನಿಕ ಕಾಮಗಾರಿಯಿಂದ ಮೃತಪಟ್ಟವರ ಕುಟುಂಬಗಳಿಗೆ ಹೆದ್ದಾರಿ ಅಧಿಕಾರಿಗಳು ಪರಿಹಾರ ನೀಡಬೇಕು. ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ತಪ್ಪಿದಲ್ಲಿ ಸ್ಥಳೀಯರೊಡಗೂಡಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ