Thursday, November 19, 2026

ಪ್ರಾಯೋಗಿಕ ಆವೃತ್ತಿ

ಉಪೇಂದ್ರ ವಿರುದ್ಧ ಎರಡನೇ ಎಫ್‌ಐಆರ್ ದಾಖಲು

‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಎಂದು ಲೈವ್ ವಿಡಿಯೋದಲ್ಲಿ ಹೇಳಿಕೆ ನೀಡಿದ್ದ ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ವಿರುದ್ಧ ಎರಡನೇ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಭಾನುವಾರ ರಾತ್ರಿ 12ರ ಸುಮಾರಿಗೆ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಬೈರಪ್ಪ ಹರೀಶ್ ಕುಮಾರ್ ದೂರು ನೀಡಿದ್ದ ಹಿನ್ನೆಲೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ.

ಈ ಹಿನ್ನೆಲೆಯಲ್ಲಿ ಉಪೇಂದ್ರ ಅವರ ವಿರುದ್ಧ ಎರಡನೇ ಎಫ್ಐಆರ್ ದಾಖಲಾಗಿದೆ. ಈ ಮೊದಲು ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂದನ್ ಎಂಬವರು ನೀಡಿದ್ದ ದೂರಿನ ಮೇರೆಗೆ ಮೊದಲ ಎಫ್ಐಆರ್ ದಾಖಲಾಗಿತ್ತು.

ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕರಾದ ಉಪೇಂದ್ರ ಅವರು, ಫೇಸ್ ಬುಕ್ ಲೈವ್ ವಿಡಿಯೋ ವೇಳೆ ‘ಊರು ಅಂದ್ಮೇಲೆ ಹೊಲೆಗೇರಿ ಕೂಡ ಇರುತ್ತೆ’ ಎಂದಿದ್ದರು. ಇದು ಈಗ ವಿವಾದಕ್ಕೆ ಕಾರಣವಾಗಿದೆ.

 ವಿವಾದದ ಬೆನ್ನಲ್ಲೇ ನಟ ಉಪೇಂದ್ರ ಪೋಸ್ಟ್‌‌

“>

ಈ ಕುರಿತು ಉಪೇಂದ್ರ ಬಂಧನವಾಗಲೇಬೇಕು ಎಂದು ರಣಧೀರ ಪಡೆಯ ರಾಜ್ಯಾಧ್ಯಕ್ಷ  ಭೈರಪ್ಪ ಹರೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

“>

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ