ಐಪಿಎಲ್ ಕ್ರಿಕೆಟ್ ಟೂರ್ನಮೆಂಟ್ ರೀತಿಯಲ್ಲಿಯೇ ಮದ್ದೂರಿನಲ್ಲಿ ಜೂನ್.1 ರಿಂದ ಯುಪಿಲ್ (ಉದಯ್ ಪ್ರೀಮಿಯರ್ ಲೀಗ್) ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದೆ.
ಸಮಾಜ ಸೇವಕ ಕದಲೂರು ಉದಯ್ ಅಭಿಮಾನಿಗಳು ಅವರ ಹುಟ್ಟು ಹಬ್ಬದ ಪ್ರಯುಕ್ತ ಆಯೋಜಿಸಿರುವ
ಉದಯ್ ಪ್ರೀಮಿಯರ್ ಲೀಗ್ (ಯುಪಿಎಲ್) ಪೋಸ್ಟರ್ ಅನ್ನು ಇಂದು ಬಿಡುಗಡೆ ಮಾಡಲಾಯಿತು.
ಸಮಾಜ ಸೇವಕ ಕದಲೂರು ಉದಯ್ ಯುಪಿಎಲ್ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿ, ನನ್ನ ಜನ್ಮದಿನದ ಪ್ರಯುಕ್ತ ಅಭಿಮಾನಿಗಳು ಯುಪಿಲ್ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಿದ್ದಾರೆ. ಅವರ ಅಭಿಮಾನಕ್ಕೆ ನಾನು ಚಿರಋಣಿಯಾಗಿದ್ದೇನೆ. ಕ್ರಿಕೆಟ್ ಕ್ರೀಡಾಕೂಟ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಸಿಪಾಯಿ ಶ್ರೀನಿವಾಸ್, ಕದಲೂರು ತಿಮ್ಮೇಗೌಡ, ಯತೀಶ್,ಗೊರವನಹಳ್ಳಿ ಗ್ರಾ.ಪಂ. ಅಧ್ಯಕ್ಷ ಮಧು, ಚಿದಂಬರಂ ಮೂರ್ತಿ, ಕರಡಕೆರೆ ಮನು , ನಾಗೇಶ್ , ಪುನೀತ್, ಗೌತಮ್ ಇನ್ನಿತರರು ಹಾಜರಿದ್ದರು.