Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಉಪ್ಪಾರ ಸಮುದಾಯ ಭವನ ನಿರ್ಮಾಣಕ್ಕೆ ಜಾಗ: ರವಿಕುಮಾರ್

ಹಿಂದುಳಿದ ಉಪ್ಪಾರ ಸಮುದಾಯ ಸೇರಿದಂತೆ ನಾಲ್ಕೈದು ಸಣ್ಣ ಸಣ್ಣ ಸಮುದಾಯಗಳಿಗೆ ಭವನ ನಿರ್ಮಾಣ ಮಾಡಿಕೊಡಲು ಜಾಗ ಗುರುತಿಸುವ ಕೆಲಸ ನಡೆಯುತ್ತಿದ್ದು, ಒಂದು ವರ್ಷದಲ್ಲಿ ಭವನ ನಿರ್ಮಾಣಕ್ಕೆ ಕೈ ಹಾಕಲಾಗುವುದು ಎಂದು ಶಾಸಕ ರವಿಕುಮಾರ್ ಗಣಿಗ ತಿಳಿಸಿದರು.

ಮಂಡ್ಯ ನಗರದ ಗಾಂಧಿ ಭವನದಲ್ಲಿ ಮಂಡ್ಯ ಜಿಲ್ಲಾ ಜೈ ಭಗೀರಥ ಉಪ್ಪಾರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಡೆದ ಶ್ರೀ ಭಗೀರಥ ಜಯಂತ್ಯೋತ್ಸವ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರು ಮತ್ತು ಸ್ತ್ರೀ ಶಕ್ತಿ ಸಂಘದವರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಸಣ್ಣ ಸಣ್ಣ ಸಮುದಾಯಗಳನ್ನು ಮೇಲೆತ್ತುವ ಕೆಲಸ ಮಾಡುತ್ತಿದೆ. ಸಮುದಾಯದ ಸ್ವಾಮೀಜಿಗಳು ಇಡುವ ಬೇಡಿಕೆಗಳನ್ನೆಲ್ಲ ನಮ್ಮ ಸರ್ಕಾರ ಮಾಡುತ್ತ ಬಂದಿದೆ. ಮುಂದಿನ ದಿನಗಳಲ್ಲಿ ಈ ಸಮುದಾಯ ಭವನ ನಿರ್ಮಿಸಿಕೊಡಬೇಕೆಂದು ನಮ್ಮ ಉದ್ದೇಶವಾಗಿದೆ. ಎಂದರು.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಬ್ರಹ್ಮ ವಿದ್ಯಾನಗರ ಬಡಾವಣೆಯ ಭಗೀರಥ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಪುರುಷೋತ್ತಮಾನಂದ ಪುರಿ ಸ್ವಾಮೀಜಿಗಳ ದಿವ್ಯ ಸಾನಿಧ್ಯ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಉದ್ಘಾಟಿಸಿದರು.

ವೇದಿಕೆಯಲ್ಲಿ ಮಳವಳ್ಳಿ ತಾಲೂಕಿನ 500 ಹುಂಡಿಯ ಸರಗೂರು ಅಯ್ಯನವರ ಮಠದ ಮಹದೇವಸ್ವಾಮಿ, ಮೈಸೂರು ನಗರಾಭಿವೃದ್ಧಿಯ ಮಾಜಿ ಅಧ್ಯಕ್ಷರಾದ ಎಚ್. ಎನ್. ವಿಜಯಕುಮಾರ್, ಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷ ನಾಗರತ್ನ, ನಿವೃತ್ತ ಹೆಚ್ಚುವರಿ ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತರಾದ ಡಿ. ಜಗನ್ನಾಥ ಸಾಗರ್, ರಾಜ್ಯ ಉಪ್ಪಾರರ ಸಂಘದ ರಾಜ್ಯಾಧ್ಯಕ್ಷ ಮತ್ತು ಕೆಪಿಸಿಸಿ ಸದಸ್ಯರಾದ ಅರ್ಜುನ್ ತಮ್ಮಣ್ಣ ನಾಯಕವಾಡಿ, ಸಿ.ಎಸ್. ಮಂಜುನಾಥ್, ಡಾ. ಹೊನ್ನಪ್ಪ ಬಿ. ಬಂಡಿ ಹಾಗೂ ಇನ್ನಿತರರಿದ್ದರು.

ಇದೇ ಸಂದರ್ಭದಲ್ಲಿ ವಿಶೇಷ ಪ್ರತಿಭೆ ಹಾಗೂ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆಯನ್ನು ಸಲ್ಲಿಸಿದವರಿಗೆ ಅಭಿನಂದಿಸಲಾಯಿತು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!