ನಗರೋತ್ಥಾನ ಯೋಜನೆಯ ಅನುದಾನದಲ್ಲಿ ಶಾಸಕ ಸುರೇಶ್‌ಗೌಡ ಅವರು ಗೋಲ್‌ಮಾಲ್ ನಡೆಸಿದ್ದಾರೆಂದು ಆರೋಪಿಸಿ ನಾಗಮಂಗಲ ಪುರಸಭೆಯ 11 ಮಂದಿ ಸದಸ್ಯರು ಮಂಡ್ಯ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತು ಶಾಸಕ ಸುರೇಶ್‌ಗೌಡ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಗರೋತ್ಥಾನ ಯೋಜನೆಯಡಿ ನಾಗಮಂಗಲಕ್ಕೆ 10 ಕೋಟಿ ರೂ. ಅನುದಾನ ಬಂದಿದೆ. ಆದರೆ ಶಾಸಕರು ಕಾಂಗ್ರೆಸ್ ಸದಸ್ಯರನ್ನು ಗಣನೆಗೆ ತೆಗೆದುಕೊಳ್ಳದೆ ಅನುದಾನವನ್ನು ತಮ್ಮ ಪಕ್ಷದ ಸದಸ್ಯರ ವಾರ್ಡ್ ಗಳಿಗೆ ಹಂಚಿಕೆ ಮಾಡಿದ್ದಾರೆ ಎಂದು ಆಪಾದಿಸಿದರು.
ಪಟ್ಟಣದ ಅಭಿವೃದ್ದಿಗೆ ಅನುದಾನ ಬಳಕೆ ಮಾಡಬೇಕಿದೆ. ಆದರೆ ಹೊರ ಪ್ರದೇಶಕ್ಕೂ ಅನುದಾನ ನೀಡುವುದರ ಮೂಲಕ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ದೂರಿದರು.
ಶಾಸಕರು ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದೆ. ಆದ್ದರಿಂದ ಕ್ರಿಯಾ ಯೋಜನೆಯನ್ನು ತಡೆ ಹಿಡಿಯ ಬೇಕು ಎಂದು ಪ್ರತಿಭಟನಾಕಾರರು ಆಗ್ರಹಪಡಿಸಿದರು.
ಕ್ಷೇತ್ರದಲ್ಲಿ ಶಾಸಕರು ತಮ್ಮ ಪ್ರಭಾವ ಬಳಸಿ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ. ಕಾಂಗ್ರೆಸ್ ಸದಸ್ಯರನ್ನು ಪರಿಗಣಿಸುತ್ತಿಲ್ಲ. ತಮಗೆ ಇಚ್ಚೆ ಬಂದಂತೆ ನಡೆದುಕೊಳ್ಳುತ್ತಿದ್ದಾರೆ ಎಂದರು.
ಈ ವಿಚಾರವಾಗಿ ಪುರಸಭೆಗಳಲ್ಲಿ ತಮ್ಮ ಅಹವಾಲುಗಳನ್ನು ತೊಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ. ವಿರೋಧ ಪಕ್ಷದವರ ಅರ್ಜಿಗಳನ್ನು ಕಸದ ಬುಟ್ಟಿಗೆ ಹಾಕಿ ತಮಗಿಷ್ಟ ಬಂದಂತೆ ನಡೆಸಿಕೊಂಡು ಬರುತ್ತಿದ್ದಾರೆ.