Thursday, November 19, 2026

ಪ್ರಾಯೋಗಿಕ ಆವೃತ್ತಿ

ಹೊರಗುತ್ತಿಗೆ ನೌಕರರಿಗೆ ನೇರಪಾವತಿ ಘೋಷಿಸದ ರಾಜ್ಯ ಬಜೆಟ್ ಉಪಯೋಗವಿಲ್ಲದ್ದು

  • ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿ ಜಾರಿಗೊಳಿಸಲೇಬೇಕು
  • ಇದೇ ಫೆ.22ರಂದು ನಮ್ಮ ನಡಿಗೆ ಮುಖ್ಯಮಂತ್ರಿಗಳ ಮನೆಕಡೆಗೆ : ಧರಣಿ 

ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್ಟಿನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ನೇರಪಾವತಿಗೆ ಒಳಪಡಿಸದೆ ಸರಕಾರ ನಿರಾಶೆ ಮೂಡಿಸಿದೆ.ಒಟ್ಟಾರೆ ಬಜೆಟ್ ಹೊರಗುತ್ತಿಗೆ ನೌಕರರ ಪಾಲಿಗೆ ನಿರಾಶಾದಾಯಕವಾಗಿದೆ ಎಂದು ಮಂಡ್ಯ ನಗರಸಭೆಯ ಹೊರಗುತ್ತಿಗೆ ವಾಹನ ಚಾಲಕರು ನಗರಸಭೆ ಎದುರು ಧಿಡೀರ್ ಪ್ರತಿಭಟನೆ ನಡೆಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ.ಕಳೆದ ಜುಲೈನಲ್ಲಿ ನಡೆದ ಪ್ರತಿಭಟನೆ ಸಂಧರ್ಭದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ಕಸ ಸಾಗಿಸುವ ವಾಹನ ಚಾಲಕರು, ನೀರುಸರಬರಾಜು ಸಹಾಯಕರು, ಲೋಡರ್ಸ್, ಕ್ಲೀನರ್ಸ್, ಹೆಲ್ಪರ್ಸ್, ಯೂಜಿಡಿ ಕಾರ್ಮಿಕರು, ಡೇಟಾಎಂಟ್ರಿ ಆಪರೇಟರುಗಳು, ಬೀದಿದೀಪ ನಿರ್ವಾಹಕರು, ಗಾರ್ಡನರುಗಳು, ಕಚೇರಿ ಸಹಾಯಕರು, ಸ್ಮಶಾನ ಕಾವಲುಗಾರರು ಸೇರಿದಂತೆ ಎಲ್ಲರನ್ನು ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೆ ತರುವುದಾಗಿ ಸ್ವತಃ ಮುಖ್ಯಮಂತ್ರಿಗಳು ಘೋಷಿಸಿದ್ದರು.

ಈ ಘೋಷಣೆ ಈ ಬಜೆಟ್ಟಿನ ಮೂಲಕ ಸುಳ್ಳಾಗಿದೆ.ರಾಜ್ಯ ಸರಕಾರ ಹೊರಗುತ್ತಿಗೆ ನೌಕರರಿಗೆ ಸೇವಾಭದ್ರತೆ ನೀಡುವಲ್ಲಿ ವಿಫಲವಾಗಿದೆ. ನಗರಗಳ ಸ್ವಚ್ಚತೆ ಕುಡಿಯುವ ನೀರಿನ ಸಮರ್ಪಕ ಸೇವೆಯಲ್ಲಿ ತೊಡಗಿಕೊಂಡಿರುವ ಹೊರಗುತ್ತಿಗೆ ನೌಕರರನ್ಮು ಈ ಬಜೆಟ್ ವಂಚಿಸಿದೆ.

ಕರೋನಾ ಸಂಧರ್ಭದಲ್ಲಿ ತಮ್ಮ ಪ್ರಾಣದ ಹಂಗೂ ತೊರೆದು ದುಡಿದ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಸರಕಾರ ನೀಡುವ ಗೌರವ ಇದಾಗಿದೆ.ಈ ಹಿಂದೆ ಸರಕಾರ ಘೋಷಿಸಿದಂತೆ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡುವ ಸಲುವಾಗಿ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿ ಜಾರಿಗೊಳಿಸಲೇಬೇಕು.ಇದಕ್ಕಾಗಿ ಇದೇ ಫೆ.22ರಂದು ನಮ್ಮ ನಡಿಗೆ ಮುಖ್ಯಮಂತ್ರಿಗಳ ಮನೆಕಡೆಗೆ ಎಂಬ ಘೋಷಣೆಯೊಂದಿಗೆ ಮುಖ್ಯಮಂತ್ರಿಗಳ ಮನೆ ಎದುರು ಧರಣಿ ನಡೆಸಲಿದ್ದೇವೆ.

ಇನ್ನಾದರೂ ಸರಕಾರ ಎಚ್ಚೆತ್ತು, ಹೊರಗುತ್ತಿಗೆ ನೌಕರರನ್ನು ನೇರಪಾವತಿಗೆ ಒಳಪಡಿಸಿ ಹಂತಹಂತವಾಗಿ ಖಾಯಂಗೊಳಿಸುವಂತೆ ಆಗ್ರಹಿಸಿದರು.

ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಚನ್ನೇಶ್ ,ಕರುನಾಡ ಸೇವಕರ ಸಂಘದ ಚಂದ್ರು, ಕೆಂಪರಾಜೂ, ಅನಿಲ್, ಮಣಿ, ಪದ್ಮಾ ಸೇರಿದಂತೆ ಹಲವಾರು ಹೊರಗುತ್ತಿಗೆ ನೌಕರರು ಭಾಗಿಯಾಗಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ