Thursday, September 19, 2024

ಪ್ರಾಯೋಗಿಕ ಆವೃತ್ತಿ

ಉತ್ತರಾಖಂಡ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಿದ್ದತೆ !

ಉತ್ತರಾಖಂಡ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಸಾಧ್ಯತೆ ಇದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದ್ದು, ಏಕರೂಪ ನಾಗರಿಕ ಸಂಹಿತೆ ಜಾರಿಯಾದರೆ ವಿವಾದಾತ್ಮಕ ನೀತಿ ಜಾರಿಗೆ ತಂದ ದೇಶದ ಮೊದಲ ರಾಜ್ಯವಾಗಲಿದೆ.

ಈ ಕುರಿತು ನಿವೃತ್ತ ನ್ಯಾಯಮೂರ್ತಿ ರಂಜನಾ ದೇಸಾಯಿ ನೇತೃತ್ವದಲ್ಲಿ ರಚಿಸಲಾದ ಸಮಿತಿಯು ಮುಂದಿನ 2 ದಿನಗಳಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ವರದಿಯನ್ನು ಸಲ್ಲಿಸಲಿದೆ.

ಉತ್ತರಾಖಂಡ ವಿಧಾನಸಭೆಯ ವಿಶೇಷ ಅಧಿವೇಶನವನ್ನು ದೀಪಾವಳಿಯ ಬಳಿಕ ಕರೆಯಲಾಗುತ್ತದೆ ಎಂದು ಹೇಳಲಾಗುತ್ತಿದ್ದು, ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆ ಕುರಿತ ಮಸೂದೆಯನ್ನು ಅಂಗೀಕರಿಸುವ ಮತ್ತು ಅದಕ್ಕೆ ಕಾನೂನು ಸ್ಥಾನಮಾನವನ್ನು ನೀಡುವ ಸಾಧ್ಯತೆ ಇದೆ.

ಜೂನ್‌ನಲ್ಲಿ ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಕರಡು ಸಮಿತಿಯ ಸದಸ್ಯರಾದ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರು ಉತ್ತರಾಖಂಡಕ್ಕೆ ಏಕರೂಪ ನಾಗರಿಕ ಸಂಹಿತೆಯ ಕರಡು ರಚನೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಾಗುವುದು ಎಂದು ಹೇಳಿದ್ದರು.

ಉತ್ತರಖಂಡದ ಉದ್ದೇಶಿತ ಏಕರೂಪ ನಾಗರಿಕ ಸಂಹಿತೆಯ ಕರಡು ಈಗ ಪೂರ್ಣಗೊಂಡಿದೆ ಎಂದು ನಿಮಗೆ ತಿಳಿಸಲು ನನಗೆ ಅಪಾರ ಸಂತೋಷವಾಗಿದೆ. ತಜ್ಞರ ಸಮಿತಿಯ ವರದಿಯನ್ನು ಕರಡು ಪ್ರತಿಯೊಂದಿಗೆ ಮುದ್ರಿಸಿ ಉತ್ತರಾಖಂಡ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ನ್ಯಾಯಮೂರ್ತಿ ದೇಸಾಯಿ ಹೇಳಿದ್ದಾರೆ.

ಉತ್ತರಾಖಂಡದಂತೆ, ಗುಜರಾತ್‌ನಲ್ಲಿ ಕೂಡ 2024ರಲ್ಲಿ ಲೋಕಸಭಾ ಚುನಾವಣೆಯ ಮೊದಲು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುವ ಸಾಧ್ಯತೆ ಇದೆ ಎನ್ನಲಾಗಿದೆ. ಒಂದು ವೇಳೆ ನೀತಿ ಜಾರಿಗೆ ತಂದರೆ ಗುಜರಾತ್‌ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆಗೊಳಿಸಿದ 2ನೇ ರಾಜ್ಯವಾಗಲಿದೆ ಎಂದು ವರದಿ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!