Tuesday, November 24, 2026

ಪ್ರಾಯೋಗಿಕ ಆವೃತ್ತಿ

ವಡ್ಡರಹಳ್ಳಿ ಹಾಗೂ ಹೆಗ್ಗಡಹಳ್ಳಿ ಗ್ರಾಮಸ್ಥರ ನಡುವೆ ಮಾರಾಮಾರಿ ಜಗಳ

ವರದಿ: ಡಾ.ಕೆ.ಆರ್.ನೀಲಕಂಠ
ಕೃಷ್ಣರಾಜಪೇಟೆ

ಕೆರೆ ಒತ್ತುವರಿ ವಿಚಾರಕ್ಕೆ ಸಂಬಂಧಿಸಿದಂತೆ ತಾಲೂಕಿನ ಕಸಬಾ ಹೋಬಳಿಯ ವಡ್ಡರಹಳ್ಳಿ ಹಾಗೂ ಹೆಗ್ಗಡಹಳ್ಳಿ ಗ್ರಾಮಸ್ಥರ ನಡುವೆ ಮಾರಾಮಾರಿ ನಡೆದಿದ್ದು ತೆಂಗಿನ ಗುದಮೊಟ್ಟೆ ಹಾಗೂ ಮರದ ದೊಣ್ಣೆಗಳಲ್ಲಿ ಬಡದಾಡಿಕೊಂಡಿದ್ದು 16 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಡ್ಡರಹಳ್ಳಿ ಗ್ರಾಮದ ಸರಹದ್ದಿಗೆ ಸೇರಿದ 23 ಎಕರೆ 30 ಗುಂಟೆ ವಿಸ್ತೀರ್ಣದ ಕೆರೆಯ ಹೂಳೆತ್ತಿ, ಅಭಿವೃದ್ಧಿಪಡಿಸುವ ಕಾಮಗಾರಿಯು 75 ಲಕ್ಷರೂ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯ ವಿಶೇಷ ಅನುದಾನದಲ್ಲಿ ನಡೆಯುತ್ತಿದೆ.

ಕೆರೆಯ ಒತ್ತುವರಿದಾರರು ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಕಾರ್ಯಕರ್ತರಾಗಿದ್ದು ಒತ್ತುವರಿ ತೆರವು ಕಾರ್ಯಾಚರಣೆಯ ಸಂಬಂಧ ಪರಸ್ಪರ ಆರೋಪ ಪ್ರತ್ಯಾರೋಪಗಳು ಕೇಳಿ ಬಂದಿದ್ದವು. ಇಂದು ಮಧ್ಯಾಹ್ನ ವಡ್ಡರಹಳ್ಳಿ ಗ್ರಾಮದ ಕೆರೆಯ ಅಭಿವೃದ್ಧಿ ಕಾಮಗಾರಿಯ ವೀಕ್ಷಣೆ ನಡೆಸಿದ ತಹಶೀಲ್ದಾರ್ ನಿಸರ್ಗಪ್ರಿಯ ಕೆರೆಯ ಒತ್ತುವರಿದಾರರು ಎಷ್ಟೇ ಪ್ರಭಾವಶಾಲಿಗಳಾಗಿದ್ದರು ಯಾವುದೇ ಮುಲಾಜಿಲ್ಲದೇ ತೆರವು ಕಾರ್ಯಾಚರಣೆ ನಡೆಸಲಾಗುವುದು.ಇದರಲ್ಲಿ ಯಾವುದೇ ಪ್ರಭಾವಕ್ಕೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಠಪಡಿಸಿ ಕೆರೆಯ ಅಭಿವೃದ್ಧಿ ಕಾಮಗಾರಿ ನಡೆಸುವಂತೆ ಸೂಚಿಸಿ ತುರ್ತು ಕಾರ್ಯ ನಿಮಿತ್ತ ಬೇರೆಡೆಗೆ ತೆರಳಿದ ನಂತರ ಕೆರೆಯ ಅಂಗಳದ ಅಕ್ಕಪಕ್ಕದ ಜಮೀನುಗಳಲ್ಲಿ ನೆರೆದಿದ್ದ ಎರಡೂ ಗ್ರಾಮಗಳ ಗ್ರಾಮಸ್ಥರು ಸೇರಿದಂತೆ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಆರೋಪ, ಪ್ರತ್ಯಾರೋಪ ಮಾಡಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಜಗಳವನ್ನು ಬಿಡಿಸಿ ಶಾಂತಿ ಕಾಪಾಡಲು ಹೋದ ಎರಡೂ ಗ್ರಾಮಗಳ ಹಿರಿಯರಿಗೂ ತೆಂಗಿನ ಮರದ ಗುದಮೊಟ್ಟೆಯ ಏಟುಗಳು ಬಲವಾಗಿಯೇ ಬಿದ್ದಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಡ್ಡರಹಳ್ಳಿ ಹಾಗೂ ಹೆಗ್ಗಡಹಳ್ಳಿ ಗ್ರಾಮದ ಜನರು ಪರಸ್ಪರ ಹೊಡೆದಾಡಿಕೊಂಡ ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ  ಕಿಕ್ಕೇರಿ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ರೇವತಿ, ಗ್ರಾಮಾಂತರ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಜಗಧೀಶ್ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಎರಡೂ ಗ್ರಾಮಗಳಲ್ಲಿಯೂ
ಮುಂಜಾಗ್ರತಾ ಕ್ರಮವಾಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ