Friday, September 20, 2024

ಪ್ರಾಯೋಗಿಕ ಆವೃತ್ತಿ

ಮೇಲುಕೋಟೆ ವೈರಮುಡಿ ಉತ್ಸವಕ್ಕೆ ಸಿದ್ಧತೆ ನಡೆಸಿ; ಚಲುವರಾಯಸ್ವಾಮಿ ಸೂಚನೆ

ಮಂಡ್ಯ ಜಿಲ್ಲಾಡಳಿತದ ವತಿಯಿಂದ ಮಾರ್ಚ್ 16  ರಿಂದ 28 ರವರೆಗೆ  ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವಗಳು ನಡೆಯಲಿದ್ದು, ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಸಭಾಂಗಣದಲ್ಲಿ 2024 ನೇ ಸಾಲಿನ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ಕಾರ್ಯಕ್ರಮದ ಪೂರ್ವಸಿದ್ಧತಾ  ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯದಲ್ಲಿ ಮಾರ್ಚ್ 21 ರಂದು ವೈರಮುಡಿ ಕಿರೀಟ ಧಾರಣೆ ಮತ್ತು ಉತ್ಸವ ನಡೆಯಲಿದೆ. ಉತ್ಸವದಲ್ಲಿ ಯಾವುದೇ ಲೋಪವಾಗದಂತೆ ಮುಂಜಾಗ್ರತೆವಹಿಸಿ, ಬ್ರಹ್ಮೋತ್ಸವಕ್ಕೆ  ಆಗಮಿಸುವ ಭಕ್ತಾಧಿಗಳಿಗೆ ಮೂಲಭೂತ ವ್ಯವಸ್ಥೆಗಳಾದ ಶುದ್ಧ ಕುಡಿಯುವ ನೀರು, ಅಗತ್ಯವಿರುವ ಸ್ಥಳಗಳಲ್ಲಿ ತಾತ್ಕಾಲಿಕ ಶೌಚಾಲಯದ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ ಮಾಡಿ ಜೊತೆಗೆ ಮೇಲುಕೋಟೆಯ ಪ್ರಮುಖ ರಸ್ತೆಗಳನ್ನು ದುರಸ್ತಿಗೊಳಿಸಿ ಎಂದರು.

ಬ್ರಹ್ಮೋತ್ಸವ ಸಂಬಂಧ ಸರ್ಕಾರದಿಂದ ಅನುದಾನ ಬಿಡುಗಡೆಗೆ ಕ್ರಮವಹಿಸಲಾಗುವುದು. ತಕ್ಷಣಕ್ಕೆ ತಾತ್ಕಾಲಿಕವಾಗಿ ಅನುದಾನ ಬಿಡುಗಡೆಗೊಳಿಸಲಾಗುವುದು ಮೂಲಭೂತ ಸೌಲಭ್ಯ ಕೆಲಸ ಪ್ರಾರಂಭಿಸಿ, ಸ್ಥಳೀಯ ಶಾಸಕರ ಸಲಹೆಯಂತೆ ಕೆಲಸಗಳನ್ನು ಪ್ರಾರಂಭಿಸಿರಿ. ಜೊತೆಗೆ ಸಾರ್ವಜನಿಕರ ಸಹಕಾರವು ಅತ್ಯಗತ್ಯ ಎಂದರು.

ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ಭಕ್ತಾಧಿಗಳಿಗೆ ವಾಹನ ಪಾರ್ಕಿಂಗ್ ಗಾಗಿ ಸ್ಥಳ ಗುರುತಿಸಿ ಸಮತಟ್ಟು ಮಾಡಿ, ಪಾರ್ಕಿಂಗ್ ಸ್ಥಳದಲ್ಲಿ ಕುಡಿಯುವ ನೀರು, ಶೌಚಾಲಯಗಳಂತಹ ಮೂಲಭೂತ ಸೌಲಭ್ಯ ನೀಡಿ, ವಾಹನ ಪಾರ್ಕಿಂಗ್ ಸ್ಥಳದಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆ, ಸುಗಮ ವಾಹನ ಸಂಚಾರಕ್ಕಾಗಿ ಹಾಗೂ ಭಕ್ತಾದಿಗಳ ಅನುಕೂಲಕ್ಕಾಗಿ ಅಗತ್ಯವಿರುವ ಕೆ.ಎಸ್.ಆರ್.ಟಿ.ಸಿ. ಬಸ್ ಗಳ ವ್ಯವಸ್ಥೆಯನ್ನು ಮಾಡಿಕೊಳ್ಳಿ ಎಂದರು.

ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರದಿಂದ ಮೇಲುಕೋಟೆಗೆ 140 ಕೆ.ಎಸ್.ಆರ್.ಟಿ.ಸಿ ಬಸ್ ವ್ಯವಸ್ಥೆ ಮಾಡಲಾಗಿದ್ದು, ಜೊತೆಗೆ ಬಸ್ ಪಾರ್ಕಿಂಗ್ ಸ್ಥಳದಿಂದ ದೇವಾಲಯಕ್ಕೆ 10 ಉಚಿತ ಬಸ್ ವ್ಯವಸ್ಥೆ ಮಾಡಲಾಗುವುದು. ಮಹೋತ್ಸವವನ್ನು ಅಚ್ಚುಕಟ್ಟಾಗಿ ನಡೆಸಲು ಸ್ವಾಗತ, ಆಹಾರ, ಸ್ವಚ್ಚತೆ ಸೇರಿದಂತೆ ವಿವಿಧ  ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸಭೆಗೆ ಮಾಹಿತಿ ನೀಡಿದರು.

ಬೂದನೂರು ಉತ್ಸವದ ಲೋಗೋ ಬಿಡುಗಡೆ

ಬೂದನೂರು ಉತ್ಸವ ಆಚರಣೆಗೆ ಸಿದ್ಧತೆ ನಡೆದಿದ್ದು, ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಲೋಗೋ ಬಿಡುಗಡೆ ಮಾಡಿದರು

ಸಭೆಯಲ್ಲಿ ವಿಧಾನಸಭೆ ಶಾಸಕರಾದ ಎ.ಬಿ ರಮೇಶ್ ಬಂಡಿಸಿದ್ದೇಗೌಡ, ಪಿ.ರವಿಕುಮಾರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!