ಸಮಾಜ ಕಲ್ಯಾಣ ಇಲಾಖೆಯ ಎಸ್.ಪಿ.ಎಸ್ ಯೋಜನೆ ಅಡಿಯಲ್ಲಿ ಮಳವಳ್ಳಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸುಮಾರು 2.20 ಕೋಟಿ ರೂ. ವೆಚ್ಚ ಕಾಮಗಾರಿಗಳಿಗೆ ಗುದ್ದಲಿ ಪೂಜೆಯನ್ನು ಶಾಸಕ ಪಿ. ಎಂ ನರೇಂದ್ರ ಸ್ವಾಮಿ ನೆರೆವೇರಿಸಿದರು.
ಮಳವಳ್ಳಿ ತಾಲೂಕಿನ ನಿಡಘಟ್ಟ, ಗಾಜನೂರು, ನೆಲಮಾಕನಹಳ್ಳಿ, ಜೋಗಿಪುರ, ಚಂದಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಸುಮಾರು 2.20 ಕೋಟಿ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ ಚಾಲನೆ ನೀಡಿದರು.
ಮಳವಳ್ಳಿ ತಾಲೂಕಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಕಾಲೋನಿಗಳ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನದ ತಂದು ಸಮಗ್ರವಾಗಿ ಅಭಿವೃದ್ಧಿ ಪಡಿಸುತ್ತೇನೆ ಎಂದು ತಿಳಿಸಿದರು. ಇದೆ ವೇಳೆಯಲ್ಲಿ ಚಂದಹಳ್ಳಿ ಕೆರೆ ತುಂಬಿದ ಹಿನ್ನೆಲೆಯಲ್ಲಿ ಬಾಗಿನ ಅರ್ಪಿಸಿದರು.
ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿಪಿ ರಾಜು, ಮನ್ಮುಲ್ ನಿರ್ದೇಶಕ ವಿಶ್ವಾಸ್, ಕೆಡಿಪಿ ಸದಸ್ಯ ಶಶಿ, ಮುಖಂಡರಾದ ದೇವರಾಜು, ಅಂಬರೀಶ್, ಕೃಷ್ಣಮೂರ್ತಿ, ಶ್ರೀನಿವಾಸ್, ಕಿರಣ್ ಶಂಕರ್, ಸತೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.




