Thursday, September 19, 2024

ಪ್ರಾಯೋಗಿಕ ಆವೃತ್ತಿ

ವರುಣಾರ್ಭಟಕ್ಕೆ ಒಡೆದ ಹತ್ತಾರು ಕೆರೆ-ಕಟ್ಟೆಗಳು : ಸಚಿವ ಪರಿಶೀಲನೆ

ಕಳೆದ ರಾತ್ರಿ ಕೆ.ಆರ್. ಪೇಟೆ ತಾಲೂಕಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಒಡೆದಿರುವ ಕೆರೆ-ಕಟ್ಟೆಗಳನ್ನು ಕೂಡಲೇ ಸರಿಪಡಿಸುವಂತೆ ಅಧಿಕಾರಿಗಳಿಗೆ ರೇಷ್ಮೆ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಸೂಚಿಸಿದರು.

ಕೆ.ಆರ್. ಪೇಟೆ ತಾಲೂಕಿನಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಸಚಿವ ಡಾ‌.ನಾರಾಯಣಗೌಡ ಅವರು ಜಿಲ್ಲಾಡಳಿದ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಂತೇಬಾಚಹಳ್ಳಿ, ಮಾವಿನಕಟ್ಟೆ ಕೊಪ್ಪಲು, ದೊಡ್ಡಕ್ಯಾತನಹಳ್ಳಿ, ಲೋಕನಹಳ್ಳಿ, ಆಘಲಯ, ದೊಡ್ಡಸೋಮನಹಳ್ಳಿ, ಕಿಕ್ಕೇರಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಭಾರೀ ಮಳೆಯಿಂದ ಕೆರೆ- ಕಟ್ಟೆಗಳು ಒಡೆದು ಭಾರಿ ಅನಾಹುತ ಸೃಷ್ಟಿಯಾಗಿದೆ. ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದ್ದು, ನೂರಾರು ಎಕರೆಯಲ್ಲಿದ್ದ ಬೆಳೆ ಹಾನಿಯಾಗಿದೆ‌.

ಕೆರೆ,ಕಟ್ಟೆಗಳು ಒಡೆದ ಪರಿಣಾಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ನೀರು ನುಗ್ಗಿ ಹಲವು ಮನೆಗಳು ಹಾನಿಗೊಳಗಾಗಿವೆ.

ಸಚಿವ ಡಾ.ನಾರಾಯಣಗೌಡ ಅವರು ಇಂದು ಖುದ್ದು ಭೇಟಿ ನೀಡಿ, ಕೂಡಲೇ ಕೆರೆ ಕಟ್ಟೆಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮನೆಗಳು ಹಾನಿಗೊಳಗಾಗಿರುವವರಿಗೆ ಕೂಡಲೇ 10 ಸಾವಿರ ತುರ್ತು ಪರಿಹಾರ ಹಾಗೂ ಮನೆಗಳ ನಿರ್ಮಾಣಕ್ಕೆ ಅಗತ್ಯ ಪರಿಹಾರ ನೀಡುವಂತೆ ಸೂಚಿಸಿದರು. ಮಳೆಯಿಂದ ಹಾನಿಯಾಗಿರುವ ಬೆಳೆ ನಷ್ಟದ ಬಗ್ಗೆ ಕೂಡಲೇ ವರದಿ ನೀಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಇನ್ನೂ ಎರಡು ಮೂರು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದ್ದು ಜನರು ಎಚ್ಚರಿಕೆಯಿಂದಿರಬೇಕು. ಮಳೆ ನಿಂತ ಕೂಡಲೇ ಕೆರೆ ಏರಿಗಳನ್ನು ಸಂಪೂರ್ಣ ದುರಸ್ತಿಗೊಳಿಸಲಾಗುತ್ತದೆ. ಜೊತೆಗೆ ಮನೆ ಹಾನಿಗೊಳಗಾಗಿರುವವರಿಗೆ ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

ಜಿಲ್ಲಾಧಿಕಾರಿ ಎಸ್ ಅಶ್ವಥಿ, ಉಪ ವಿಭಾಗಾಧಿಕಾರಿ ಶಿವಾನಂದ ಮೂರ್ತಿ, ತಹಶಿಲ್ದಾರ್ ರೂಪ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!