Friday, September 20, 2024

ಪ್ರಾಯೋಗಿಕ ಆವೃತ್ತಿ

ಮದ್ದೂರು| ಜಿಲ್ಲಾಧಿಕಾರಿಯಿಂದ ತಾಲ್ಲೂಕು ಕಚೇರಿ ಪರಿಶೀಲನೆ

ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮಂಗಳವಾರ ಮದ್ದೂರು ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿ, ತಾಲ್ಲೂಕು ಕಚೇರಿಯಲ್ಲಿ ಪರಿಶೀಲನೆ ನಡೆಸಿದರು.

ಮದ್ದೂರು ತಾಲೂಕು ಕಚೇರಿಯಲ್ಲಿ ಕರ್ತವ್ಯಕ್ಕೆ ನಿಗದಿತ ಸಮಯಕ್ಕೆ ಹಾಜರಾಗದ ನೌಕರರ ಬೇಜಾವಬ್ದಾರಿತನವನ್ನು ಕಂಡ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹಾಜರಾತಿ ಪುಸ್ತಕವನ್ನು ಪರಿಶೀಲಿಸಿ ಸೂಕ್ತ ಕ್ರಮ ವಹಿಸುವಂತೆ ತಹಸಿಲ್ದಾರ್ ನರಸಿಂಹಮೂರ್ತಿ ಅವರಿಗೆ ಸೂಚಿಸಿದರು.

ನಂತರ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ ಭೇಟಿ ನೀಡಿ ಹೊರ ರೋಗಿಗಳ ಕುಂದು ಕೊರತೆಗಳನ್ನು ಆಲಿಸಿದರು. ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳ ಆರೋಗ್ಯ ವಿಚಾರಿಸಿ, ಊಟ, ನೀರು, ಔಷಧ ಸೇರಿದಂತೆ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡು, ರೋಗಿಗಳು ಯಾವ ಸಮಯದಲ್ಲಿ ಔಷಧ ತೆಗೆದುಕೊಳ್ಳಬೇಕು ಎಂದು ಚೀಟಿಯಲ್ಲಿ ಬರೆದು ಕೊಡುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!