Thursday, September 19, 2024

ಪ್ರಾಯೋಗಿಕ ಆವೃತ್ತಿ

ಕೇಂದ್ರ ಕೃಷಿ ಸಚಿವರೊಂದಿಗೆ ವಿಡಿಯೋ ಸಂವಾದ; ಸಹಕಾರ ನೀಡಲು ಸಚಿವ ಚಲುವರಾಯಸ್ವಾಮಿ ಮನವಿ

ರಾಜ್ಯ ಕೃಷಿ ಸಚಿವ ಎನ್ . ಚಲುವರಾಯ ಸ್ವಾಮಿ ಅವರು ಇಂದು ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ವಿವಿಧ ರಾಜ್ಯಗಳ ಕೃಷಿ ಸಚಿವರೊಂದಿಗೆ ಮುಂಗಾರು ಹಾಗೂ ಕೃಷಿ ಸಂಬಂಧಿಸಿದಂತೆ ನಡೆಸಿದ ವಿಡಿಯೋ ಸಂವಾದದಲ್ಲಿ‌ ಪಾಲ್ಗೊಂಡರು. ಈ ಸಂದರ್ಭದಲ್ಲಿ ರಾಜ್ಯದ ಯೋಜನೆಗಳಿಗೆ ಸಂಪೂರ್ಣ ಸಹಕಾರ ಕೋರಿದರು.

ಇದೇ ವೇಳೆ ಅವರು ರಾಜ್ಯದ ಮಳೆ ಬೆಳೆ,ಹಾಗೂ ರೈತರ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು‌‌. ಕರ್ನಾಟಕವು ದೇಶದ ದ್ವಿದಳ ಧಾನ್ಯ ಬೆಳೆಯ ಶೇ 11 ರಷ್ಟು ಹೊಂದಿದೆ. ರಾಜ್ಯದ 31.6 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 19.83 ಲಕ್ಷ ಟನ್ ದ್ವಿದಳ ಧಾನ್ಯ ಬೆಳೆಯಲಾಗುತ್ತಿದೆ ಎಂದು ಕೇಂದ್ರ ಸಚಿವರಿಗೆ ಚಲುವರಾಯಸ್ವಾಮಿ ಮನವರಿಕೆ ಮಾಡಿಕೊಟ್ಟರು.

ತೊಗರಿ ಬೇಳೆ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ 2ನೇ ಸ್ಥಾನದಲ್ಲಿದ್ದು ಶೇ 31 ರಷ್ಟು ಕೊಡುಗೆ ನೀಡುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಉತ್ಪಾದನೆ ಮತ್ತು ಉತ್ಪಾದಕತೆ ಎರಡನ್ನೂ ಹೆಚ್ಚಿಸಲು ಕಾರ್ಯತಂತ್ರ ರೂಪಿಸಿ ಅನುಷ್ಠಾನಗೊಳಿಸುತ್ತಿದ್ದು, ಇದರಿಂದ ಬೇಳೆ ಕಾಳುಗಳ ಆಮದು ಅವಲಂಬನೆ ತಪ್ಪಿಸಲು ಸಹಾಯಕವಾಗುತ್ತದೆ ಎಂದು ಕೃಷಿ ಸಚಿವರು ಮನವರಿಕೆ ಮಾಡಿಕೊಟ್ಟರು.

ಪ್ರಸಕ್ತ ವರ್ಷ 2024-25 ತೊಗರಿ ಬೇಳೆ ಉತ್ಪಾದನೆ ಪ್ರದೇಶವನ್ನು 2 ಲಕ್ಷ ಹೆಕ್ಟೇರ್ ನಷ್ಟು ಹೆಚ್ಚಳ ಮಾಡಲು ಯೋಜನೆ ರೂಪಿಸಲಾಗಿದೆ. ರಾಜ್ಯದ 64.2 ಕೋಟಿ ರೂ ಮೊತ್ತದ ಬೇಳೆ ಕಾಳು ಅಭಿವೃದ್ಧಿಯ ಹೆಚ್ಚುವರಿ ಯೋಜನೆಗೆ ಅನುಮೋದನೆ ನೀಡಿರುವ ಕೇಂದ್ರ ಕೃಷಿ ಸಚಿವರಿಗೆ ವಿಶೇಷ ಧನ್ಯವಾದ ಸಮರ್ಪಿಸಿದ ಅವರು
ಶೀಘ್ರದಲ್ಲೇ ವೈಯಕ್ತಿಕವಾಗಿ ಭೇಟಿ ಮಾಡುವುದಾಗಿ ತಿಳಿಸಿ, ಮುಂದೆಯೂ ನಿರಂತರ ಸಹಕಾರಕ್ಕೆ ಮನವಿ ಮಾಡಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!