ಕರ್ನಾಟಕದ ವಿಧಾನ ಪರಿಷತ್ನಲ್ಲಿ ತೆರವಾಗಿರುವ 3 ಸ್ಥಾನಗಳಿಗೆ ಕಾಂಗ್ರೆಸ್ ಪಕ್ಷವು ಜಗದೀಶ್ ಶೆಟ್ಟರ್, ಬೋಸರಾಜು ಮತ್ತು ತಿಪ್ಪಣ್ಣಪ್ಪನವರ ಹೆಸರು ಅಂತಿಮಗೊಳಿಸಿದೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ)ಯ ಪರವಾಗಿ ಹಿರಿಯ ಕಾಂಗ್ರೆಸ್ ಮುಖಂಡ ಮುಕುಲ್ ವಾಸ್ನಿಕ್ರವರು ಮೂವರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಪ್ರಕಟಣೆ ಹೊರಡಿಸಿದ್ದಾರೆ. ಇತ್ತೀಚೆಗೆ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ತ್ಯಜಿಸಿ ಕಾಂಗ್ರೆಸ್ಗೆ ಬಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಹೆಸರನ್ನು ಆರು ವರ್ಷಗಳ ಪೂರ್ಣಾವಧಿಗೆ (14.06.2028ರವರೆಗೆ) ಶಿಫಾರಸ್ಸು ಮಾಡಲಾಗಿದೆ.
ತಿಪ್ಪಣ್ಣಪ್ಪ ಕಮಕನೂರುರವರ ಹೆಸರನ್ನು 30.06.2026ರವರೆಗಿನ ಮೂರು ವರ್ಷದ ಅವಧಿಯ ಸ್ಥಾನಕ್ಕೆ ಕಣಕ್ಕಿಳಿಸಲಾಗಿದೆ. ಸಚಿವರಾಗಿ ನೇಮಕಗೊಂಡಿರುವ ಎನ್.ಎಸ್ ಬೋಸರಾಜುರವರನ್ನು 17.06.2024ರ ಒಂದು ವರ್ಷದ ಅವಧಿಯ ಸ್ಥಾನಕ್ಕೆ ಕಣಕ್ಕಿಳಿಸಲಾಗಿದೆ.
ಕಾಂಗ್ರೆಸ್ ಪಕ್ಷವು ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಬೃಹತ್ ಬಹುಮತ ಸಾಧಿಸಿದೆ. ಹಾಗಾಗಿ ಮೂರು ಪರಿಷತ್ ಸ್ಥಾನಗಳನ್ನು ಗೆದ್ದುಕೊಳ್ಳುವ ವಿಶ್ವಾಸದಲ್ಲಿದೆ.