Monday, May 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ರಕ್ತದಾನದ ಬಗೆಗಿನ ಇಚ್ಛಾಶಕ್ತಿ ಮುಂದುವರೆಯಲಿ: ವಿಜಯ್ ಆನಂದ್

ಮಂಡ್ಯನಗರದ ಪಿಇಎಸ್ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿಗಳು ಪ್ರತಿವರ್ಷದಲ್ಲಿ ಎರಡು ಬಾರಿ ರಕ್ತದಾನ ಶಿಬಿರ ಆಯೋಜಿಸುವ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ನಮ್ಮ ಸಂಸ್ಥೆಯ ಯುವಕರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು 300 ಯೂನಿಟ್ ರಕ್ತವನ್ನು ಸಂಗ್ರಹಿಸುತ್ತಾರೆ. ಯುವಕರಲ್ಲಿ ಇಂತಹ ಇಚ್ಛಾಶಕ್ತಿ ಇದೆ ರೀತಿ ಮುಂದುವರೆಯಲಿ ಎಂದು ಎಂದು ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್ ತಿಳಿಸಿದರು.

ಪಿಇಎಸ್ ಇಂಜಿನಿಯರಿಂಗ್ ಕಾಲೇಜ್ ಆವರಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಡ್ಯ ಜಿಲ್ಲಾ ಶಾಖೆ,ಯುವ ರೆಡ್ ಕ್ರಾಸ್ ಘಟಕ, ಪಿಇಎಸ್ ಇಂಜಿನಿಯರಿಂಗ್ ಕಾಲೇಜ್ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಅಂಗವಾಗಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತ
ನಾಡಿದರು.

ರಕ್ತದಾನ ಬಹಳ ಮುಖ್ಯವಾದದ್ದು ಅಪಘಾತ,ಆಪರೇಷನ್ ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಇರುತ್ತದೆ. ಯುವಕರು ಇಂತಹ ರಕ್ತದಾನ ಶಿಬಿರಗಳಲ್ಲಿ ಹೆಚ್ಚು ಪಾಲ್ಗೊಳ್ಳಬೇಕು ಎಂದು ಹೇಳಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ ಮಾತನಾಡಿ ರಕ್ತದಾನ ಬಹಳ ಮಹತ್ವದ ದಾನವಾಗಿದ್ದು,ರಕ್ತಕ್ಕೆ ಪರ್ಯಾಯವಾಗಿ ಏನು ಇರುವುದಿಲ್ಲ ಆದ್ದರಿಂದ ರಕ್ತ ಔಷಧಿ ಎಂದು ತಿಳಿಸಿದರು.

ರಕ್ತದಾನದಿಂದ ರಕ್ತ ಅವಶ್ಯಕತೆ ಇರುವವರಿಗೆ ಕೊಡುತ್ತೇವೆ. ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿಗಳು ರಕ್ತದಾನ ಮಾಡುತ್ತಿರುವುದರಿಂದ ಮಂಡ್ಯ ಜಿಲ್ಲೆಯಲ್ಲಿ ರಕ್ತ ಬಹಳ ಉಪಯೋಗವಾಗುತ್ತಿದೆ ಎಂದು ಹೇಳಿದರು.

ರೆಡ್ ಕ್ರಾಸ್ ಸಂಸ್ಥೆ ನಿರ್ದೇಶಕ ಕೆ.ಟಿ.ಹನುಮಂತು ಮಾತನಾಡಿ ರೆಡ್ ಕ್ರಾಸ್ ಸಂಸ್ಥಾಪಕ ಹೆನ್ರಿ ಡ್ಯೂನಾಂಟ್ ಅವರ ಹುಟ್ಟಿದ ದಿನದ ಅಂಗವಾಗಿ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ ಎಂದರು.

ಜನರಿಂದ ಜನರ ರಕ್ಷಣೆಯೊಂದಿಗೆ ರೆಡ್ ಕ್ರಾಸ್ ಸಂಸ್ಥೆ ಪ್ರಾರಂಭವಾಯಿತು. ಇದೊಂದು ಮಾನವೀಯ ಸೇವಾ ಸಂಸ್ಥೆಯಾಗಿದ್ದು ರಕ್ತವನ್ನು ದಾನದ ಮುಖಾಂತರ ಸಂಗ್ರಹಿಸಿ ಯುದ್ಧದ ಸಂದರ್ಭದಲ್ಲಿ ಗಾಯಗೊಂಡ ಸೈನಿಕರಿಗೆ ಮಾನವೀಯ ನೆರವು ನೀಡುವುದು, ಅಪಘಾತ ಹಾಗೂ ಅವಘಡಗಳು ಸಂಭವಿಸಿದಾಗ ರಕ್ತದ ಅವಶ್ಯಕತೆ ಇರುತ್ತದೆ ಎಂದರು.

ಇಂಜಿನಿಯರಿಂಗ್ ವಿದ್ಯಾರ್ಥಿಗಳು ರೆಡ್ ಕ್ರಾಸ್ ಸಂಸ್ಥೆಯ ಸದಸ್ಯರಾಗುವ ಮೂಲಕ ಮಾನವೀಯ ಸೇವೆಯಲ್ಲಿ ತೊಡಗಿಸಿಕೊಳ್ಳಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಿಇಎಸ್ ಇಂಜಿನಿಯರಿಂಗ್ ಕಾಲೇಜ್ ಪ್ರಾಂಶುಪಾಲ ಡಾ.ಹೆಚ್.ಎಂ.ನಂಜುಂಡಸ್ವಾಮಿ, ಉಪ ಪ್ರಾಂಶುಪಾಲ ಡಾ.ಎಸ್.ವಿನಯ್, ಪಿಇಎಸ್ ಇಂಜಿನಿಯರಿಂಗ್ ಕಾಲೇಜು ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿ ಡಾ.ಬಿ.ಷಣ್ಮುಖ, ರೆಡ್ ಕ್ರಾಸ್ ಸಂಸ್ಥೆ ಗೌರವ ಕಾರ್ಯದರ್ಶಿ ಡಾ.ಕೆ.ಎಂ. ಶಿವಕುಮಾರ್,ಜಂಟಿ ಕಾರ್ಯದರ್ಶಿ ರಂಗಸ್ವಾಮಿ, ನಿರ್ದೇಶಕ ಮಂಗಲ ಎಂ.ಯೋಗೀಶ್, ಸಿಬ್ಬಂದಿಗಳಾದ ರಾಮು ಹಾಗೂ ಜಗದೀಶ್ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!