Thursday, November 19, 2026

ಪ್ರಾಯೋಗಿಕ ಆವೃತ್ತಿ

ಪರಿಶ್ರಮದಿಂದ ಕ್ರೀಡೆಯಲ್ಲಿ ಉತ್ತಮ ಸಾಧನೆ- ವಿಜಯ್ ರಾಮೇಗೌಡ

ಶಾಲಾ ಮಕ್ಕಳು ಪರಿಶ್ರಮ ಪಟ್ಟು ಅಭ್ಯಾಸ ಮಾಡಿದರೆ ಕ್ರೀಡೆಯಲ್ಲಿ ಉತ್ತಮ ಸಾಧಕರಾಗಬಹುದು ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಿತ್ರ ಫೌಂಡೇಷನ್ ಅಧ್ಯಕ್ಷ ವಿಜಯ್ ರಾಮೇಗೌಡ ಹೇಳಿದರು.

ಕೆ.ಆರ್.ಪೇಟೆ ತಾಲ್ಲೂಕಿನ ಅಲೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಅಕ್ಕಿಹೆಬ್ಬಾಳು ಹೋಬಳಿ ಮಟ್ಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇತ್ತೀಚಿಗೆ ಜರ್ಮಿನಿಯಲ್ಲಿ ನಡೆದ ವಿಶ್ವ ಮಟ್ಟರ ಕುಬ್ಜರ ಕ್ರೀಡಾಕೂಟದಲ್ಲಿ ಕೆ.ಆರ್.ಪೇಟೆ ತಾಲ್ಲೂಕಿನವರೇ ಆದ ಕ್ರೀಡಾಪಟ್ಟುವೊಬ್ಬರು 3 ಪದಕಗಳನ್ನು ಗೆದ್ದು ಉತ್ತಮ ಸಾಧನೆ ಮಾಡಿದ್ದಾರೆ, ಇದು ಹೆಮ್ಮೆಯ ವಿಚಾರವಾಗಿದೆ. ಹಾಗೇಯೇ ವಿದ್ಯಾರ್ಥಿಗಳು ಜೀವನದಲ್ಲಿ ಗುರಿಯನ್ನು ಇಟ್ಟುಕೊಂಡು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

nudikarnataka.com

ವೇದಿಕೆಯಲ್ಲಿ ಮುಖ್ಯಶಿಕ್ಷಕರಾದ ನಾಗರತ್ನ, ಮುಖಂಡರಾದ ಜಗದೀಶ್, ಅನಿಲ್ ಹಾಗೂ ಸಚಿನ್ ಎ.ಜೆ ಉಪಸ್ಥಿತರಿದ್ದರು.

ಸಮಾರಂಭಕ್ಕೆ ಆಗಮಿಸಿದ ವಿಜಯ್ ರಾಮೇಗೌಡ ಅವರನ್ನು ಅವರ ಅಭಿಮಾನಿ ಸಚಿನ್ ಎ.ಜೆ ಸೇರಿದಂತೆ ಮತ್ತಿತರರು ಪಟಾಕಿ ಸಿಡಿಸಿ ಸ್ವಾಗತಿಸಿ, ಪುಷ್ಪಾಮಾಲೆ ಹಾಕಿ ಅಭಿನಂದಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ