Saturday, May 18, 2024

ಪ್ರಾಯೋಗಿಕ ಆವೃತ್ತಿ

ಬಿಜೆಪಿಗೆ ಗುಡ್ ಬೈ ಹೇಳಿದ ಬಹುಭಾಷಾ ನಟಿ ವಿಜಯಶಾಂತಿ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಬಹುಭಾಷಾ ನಟಿ ಹಾಗೂ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ವಿಜಯಶಾಂತಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನೆರಡು ದಿನದಲ್ಲಿ ಅವರು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ.

ಕಳೆದ ಕೆಲವು ತಿಂಗಳುಗಳಿಂದ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸದ ವಿಜಯಶಾಂತಿ ಅವರು ತಮ್ಮ ರಾಜೀನಾಮೆಯನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಜಿ ಕಿಶನ್ ರೆಡ್ಡಿ ಅವರಿಗೆ ಕಳುಹಿಸಿದ್ದಾರೆ. ಕೆಲ ದಿನಗಳ ಹಿಂದೆ ತೆಲಂಗಾಣ ರಾಜ್ಯ ಉಪಾಧ್ಯಕ್ಷ ಮಲ್ಲು ರವಿ ಅವರು ವಿಜಯಶಾಂತಿ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿದ್ದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಿರಿಯ ಕಾಂಗ್ರೆಸ್​ ನಾಯಕರ ಸಮ್ಮುಖದಲ್ಲಿ ಅವರು ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಉನ್ನತ ಸುದ್ದಿ ಮೂಲಗಳು ತಿಳಿಸಿವೆ.

ಇತ್ತೀಚಿನ ದಿನಗಳಲ್ಲಿ ರಾಜ್ಯ ಬಿಜೆಪಿ ಘಟಕದ ಕಾರ್ಯವೈಖರಿ ಬಗ್ಗೆ ಅಸಮಾಧಾನ ಹೊಂದಿದ್ದ ವಿಜಯಶಾಂತಿ ಪಕ್ಷದ ಸಭೆಗಳಲ್ಲಿ ಬೇಸರ ವ್ಯಕ್ತಪಡಿಸಿದ್ದರು. ಇದಾದ ಬಳಿಕ ಪಕ್ಷದ ಚಟುವಟಿಕೆಗಳಿಂದ ದೂರು ಉಳಿದಿದ್ದ ಅವರನ್ನು ಸ್ಟಾರ್​ ಪ್ರಚಾರಕರ ಪಟ್ಟಿಯಿಂದ ಹೊರಗಿಡಲಾಗಿತ್ತು.

ವಿಜಯಶಾಂತಿ ಅವರ ಜೊತೆಗೆ ಮಾಜಿ ಶಾಸಕರಾದ ಕೋಮಟಿರೆಡ್ಡಿ, ರಾಜಗೋಪಾಲ್ ರೆಡ್ಡಿ ಮತ್ತು ಮಾಜಿ ಸಂಸದ ಜಿ.ವಿವೇಕ್ ವೆಂಕಟಸ್ವಾಮಿ ಅವರು ಬಿಜೆಪಿ ತೊರೆದು ಕಾಂಗ್ರೆಸ್​ ಸೇರುವುದಾಗಿ ಘೋಷಿಸಿದ್ದಾರೆ. ಚುನಾವಣೆಯ ಹೊಸ್ತಿಲಲ್ಲಿ ಪ್ರಮುಖ ನಾಯಕರು ಪಕ್ಷ ತೊರೆದು ಕಾಂಗ್ರೆಸ್​ ಸೇರುತ್ತಿರುವುದು ಬಿಜೆಪಿ ಪಾಳಯಕ್ಕೆ ತಲೆನೋವಾಗಿ ಪರಿಣಮಿಸಿದ್ದು, ಚುನಾವಣೆಯಲ್ಲಿ ಇದು ಯಾವ ರೀತಿ ಪರಿಣಾಮ ಬೀರಲಿದೆ ಎಂದು ಕಾದು ನೋಡಬೇಕಿದೆ.

119 ಸದಸ್ಯಬಲದ ತೆಲಂಗಾಣ ವಿಧಾನಸಭೆಗೆ ನವೆಂಬರ್ 30ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಹೊರಬೀಳಲಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!