Friday, June 21, 2024

ಪ್ರಾಯೋಗಿಕ ಆವೃತ್ತಿ

ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿಗೆ ಗೆಲುವು: ವಿಜಯೇಂದ್ರ

ಮಂಡ್ಯ ಜಿಲ್ಲೆಯ ಜನತೆ ಪ್ರಜ್ಞಾವಂತರಿದ್ದಾರೆ ಲೋಕಸಭಾ ಕ್ಷೇತ್ರದಲ್ಲಿ ಮತದಾರರು ತಮ್ಮ ಮತವನ್ನು ಹಣಕ್ಕೆ ಮಾರಿಕೊಳ್ಳುವುದಿಲ್ಲ ದೇಶದ ಸುಭದ್ರತೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನ ಕೈ ಬಲಪಡಿಸುವ ನಿಟ್ಟಿನಲ್ಲಿ ರೈತರ ಮತ್ತು ಸಾಮಾನ್ಯ ಜನರ ಸಮಸ್ಯೆ ತಿಳಿದಿರುವ ನಮ್ಮ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಅಭೂತಪೂರ್ವ ಅಂತರದ ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

ಕೆ.ಆರ್.ಪೇಟೆ ಪಟ್ಟಣದ ಪುರಸಭಾ‌ ಕಚೇರಿಯ ಮೈದಾನದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಎನ್ ಡಿ ಎ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಅವರ ಪರವಾಗಿ ಬೃಹತ್ ಬಹಿರಂಗ ಪ್ರಚಾರ ಸಭೆಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಏಪ್ರಿಲ್ 26 ರಂದು ನಡೆಯಲಿರುವ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಬಿಜೆಪಿ ಮತ್ತು ಜೆಡಿಎಸ್
ಅಭ್ಯರ್ಥಿಯಾದ ಹೆಚ್.ಡಿ ಕುಮಾರಸ್ವಾಮಿ ಅವರು ತಮ್ಮ ಮುಖ್ಯಮಂತ್ರಿ ಆಡಳಿತ ಅವಧಿಯಲ್ಲಿ ಹಲವಾರು ಜನಪರ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಿ ರಾಜ್ಯದ ರೈತರ ಸಾಲಮನ್ನ ಮಾಡಿದವರು ನಮ್ಮ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಅವರು .ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾರರು ಮತವನ್ನು ಹಣಕ್ಕೆ ಮಾರಿಕೊಳ್ಳುವುದಿಲ್ಲ ಜನನಾಯಕ ಜನಪರ ಕಾಳಜಿವಹಿಸುವ ನಮ್ಮ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಜೆಡಿಎಸ್ ಬಿಜೆಪಿ ಮೈತ್ರಿಯ ಅಭ್ಯರ್ಥಿ ಹೆಚ್. ಡಿ ಕುಮಾರಸ್ವಾಮಿ, ಮಂಡ್ಯದಲ್ಲಿ ಕಬ್ಬು, ಭತ್ತ ನಾಟಿ ಮಾಡದಂತೆ ರೈತರಿಗೆ ಕಾಂಗ್ರೆಸ್ ಸರ್ಕಾರ ಹೇಳಿದೆ. 98 ಅಡಿ ನೀರು ಇದ್ದಾಗ ನಾಟಿ ಮಾಡಬೇಡಿ ಎನ್ನುವವರು ನಾನು ಕೊಟ್ಟ ಕೊಡುಗೆ ಬಗ್ಗೆ ಮಾತನಾಡುತ್ತಾರೆ. ನನಗೆ ಸಿಕ್ಕ ಅಲ್ಪಾವಧಿಯಲ್ಲಿ ಮಂಡ್ಯ ಜನರಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಮಂಡ್ಯ ಜನರ ಯಣ ತೀರಿಸಲು ಕೆಲಸ ಮಾಡಿದ್ದೇನೆ. ಬರಗಾಲದಿಂದ ಮಂಡ್ಯದಲ್ಲಿ ಬೆಳೆಗಳು ಒಣಗುತ್ತಿವೆ.ಈ ಸರ್ಕಾರಕ್ಕೆ ರೈತರ ಮೇಲೆ ಕಿಂಚಿತ್ತೂ ಅನುಕಂಪ ಇಲ್ಲ ಎಂದು ಟೀಕಿಸಿದರು.

ಕನಕಪುರದ ಮಹಾನುಭಾವರು ನಮ್ಮ ನೀರು ನಮ್ಮ ಹಕ್ಕು ಎಂದು ಬೆಂಗಳೂರಿನವರೆಗೆ ಹೋರಾಟ ಮಾಡಿದರು. ನನಗೂ ಒಂದು ಅವಕಾಶ ಕೊಡಿ. ಪೇಪರ್‌ಪೆನ್ನು ಕೊಟ್ಟು ಅಧಿಕಾರ ಕೊಡಿ ಎಂದು ಆ ಮಹಾನುಭಾವ ಕೇಳಿದರು. ಜನರು ನಮ್ಮವನು ಎಂಬ ಕಾರಣಕ್ಕೆ ಅಧಿಕಾರ ಕೊಟ್ಟರು. ನಮ್ಮ ನೀರು ನಮ್ಮ ಹಕ್ಕು ಎಂದು ಹೋರಾಟ ಮಾಡಿದವರು ಈಗ ಎಲ್ಲಿದ್ದಾರೆ. ಈಗ ನಮ್ಮ ನೀರು ತಮಿಳುನಾಡು ಹಕ್ಕು ಎನ್ನುತ್ತಿದ್ದಾರೆ ಎಂದು ಕಿಡಿಕಾರಿದರು.

ವೇದಿಕೆಯಲ್ಲಿ ಯುವ ಘಟಕದ ಜನತಾದಳ ರಾಜ್ಯಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ, ಶಾಸಕ ಹೆಚ್.ಟಿ ಮಂಜು, ಮಾಜಿ ಸಚಿವರಾದ ಕೆ. ಸಿ ನಾರಾಯಣಗೌಡ,ಸಿ.ಎಸ್ ಪುಟ್ಟರಾಜು,ರಾಜ್ಯ ಪಿಜೆಪಿ ಜಂಟಿ ಕಾರ್ಯದರ್ಶಿ ಶರಣು ತಳ್ಳಿಕೆರೆ,ರಾಜ್ಯ ಸಹಕಾರ ಮಾರಟ ಮಹಾಮಂಡಳಿ ನಿರ್ದೇಶಕ ಚೋಳೆನಹಳ್ಳಿ ಪುಟ್ಟಸ್ವಾಮಿಗೌಡ, ಶೀಳನೆರೆ ಮೋಹನ್, ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ನಿರ್ದೇಶಕ ಕೆ.ರವಿ (ಡಾಲು ರವಿ),ಮೂಡ ಮಾಜಿ ಅಧ್ಯಕ್ಷ ಕೆ. ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!