Monday, November 23, 2026

ಪ್ರಾಯೋಗಿಕ ಆವೃತ್ತಿ

ಸರ್ಕಾರಿ ಯೋಜನೆಗಳ ಜಾಗೃತಿಗೆ ವಿಕಸಿತ ಭಾರತ ಸಂಕಲ್ಪಯಾತ್ರೆ: ಚಂದ್ರಹಾಸ್

ಕೇಂದ್ರ ಸರ್ಕಾರ ದೇಶದ ಬಡಜನರಿಗೆ, ರೈತರಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಆದರೆ, ಜನಸಾಮಾನ್ಯರಿಗೆ ಅನುಕೂಲವಾಗಬೇಕಾದ ಅನೇಕ ಯೋಜನೆಗಳ ಬಗ್ಗೆ ಅದೆಷ್ಟೋ ಜನರಿಗೆ ಮಾಹಿತಿಯೇ ಇಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಜ್ಯದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಬ್ಯಾಂಕ್ ನ ಎಫ್ ಎಸ್ ಎಲ್ ಅಧಿಕಾರಿ ಚಂದ್ರಹಾಸ್ ಅಭಿಪ್ರಾಯ ಪಟ್ಟರು.

ಮಳವಳ್ಳಿ ಪಟ್ಟಣದ ಅನಂತ ರಾಮ್ ಸರ್ಕಲ್ ನಲ್ಲಿ ಬ್ಯಾಂಕ್ ಆಫ್ ಬರೋಡ, ಕರ್ನಾಟಕ ಗ್ರಾಮೀಣ ಬ್ಯಾಂಕ್ ವತಿಯಿಂದ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಪ್ರಧಾನ ಮಂತ್ರಿ ಜನ ಸುರಕ್ಷಿತ ಯೋಜನೆ ಕಾರ್ಯಕ್ರಮ ಉದ್ಘಾಟಸಿ ಮಾತನಾಡಿದ ಅವರು, ಕೇಂದ್ರದ ಮುದ್ರಾ, ಜನಧನ್, ಪಿ.ಎಂ.ವಿಶ್ವಕರ್ಮ, ಉಜ್ವಲ ಸೇರಿದಂತೆ ವಿವಿಧ ಯೋಜನೆಗಳ ಮಾಹಿತಿಯನ್ನು ಎಲ್‌ಇಡಿ ವಾಹನಗಳ ಮೂಲಕ ಎಲ್ಲಾ ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶದ ವಾರ್ಡ್‌ಗಳಲ್ಲಿ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಸರ್ಕಾರದ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳಿಗೆ ಅದರ ಲಾಭ ಸಿಗುವಂತೆ ಮಾಡುವ

ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ಹಾಗೂ ಸಾರ್ವಜನಿಕರು ಸದುಪಯೋಗ ಉದ್ದೇಶದಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ನಂತರ ಕೆಲವು ಪಲಾನುಭವಿಗಳಿಗೆ ಉಜ್ಜಲ ಯೋಜನೆ ಅಡಿಯಲ್ಲಿ ಗ್ಯಾಸ್ ಸಿಲಿಂಡರಗಳನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಲೀಡ್ ಬ್ಯಾಂಕ್ ಮ್ಯಾನೇಜರ್ ಅರುಣ್ ಕುಮಾರ್, ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ಸೂರಿಂದ್ರ, ಎಸ್. ಬಿ. ಐ ಬ್ಯಾಂಕ್ ಅಧಿಕಾರಿ ಪ್ರಿಯದರ್ಶಿನಿ, ಮುಖ್ಯ ಅಧಿಕಾರಿ ನಾಗರತ್ನ, ಪುರಸಭೆ ಸದಸ್ಯರಾದ ನಂದಕುಮಾರ್, ಕೃಷ್ಣ, ಪ್ರಶಾಂತ್ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ